ಅಂಬೇಡ್ಕರ್ ಮತ್ತು ಸಾವಿತ್ರಿ ಬಾ ಫುಲೆ ಜಯಂತಿ । ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ
ಕನ್ನಡಪ್ರಭ ವಾರ್ತೆ ಚಾಮರಾಜನಗರಸಂವಿಧಾನದಲ್ಲಿ ಶಿಕ್ಷಣ ಮುಖ್ಯವಾದ ಪಾತ್ರ ವಹಿಸುತ್ತದೆ ಎಂದು ಶಾಸಕ ಎ.ಆರ್ ಕೃಷ್ಣಮೂರ್ತಿ ಹೇಳಿದರು. ನಗರದ ಜೆಹೆಚ್ ಪಟೇಲ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಚಾಮರಾಜನಗರ ಜಿಲ್ಲಾ ಘಟಕದಿಂದ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಮಾತೆ ಸಾವಿತ್ರಿ ಬಾ ಫುಲೆ ಜಯಂತಿ ಹಾಗೂ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.ಮಹಿಳೆಯರಿಗೆ ಶಿಕ್ಷಣ ದೊರಕಬೇಕು ಎಂದು ಸಾವಿತ್ರಿ ಬಾಫುಲೆ ಪಣತೊಟ್ಟು ಶಾಲೆ ತೆರೆದು ಮಹಿಳೆಯರಿಗೆ ಶಿಕ್ಷಣ ನೀಡಿದರು. ಶಿಕ್ಷಣದಲ್ಲಿ ಮೀಸಲಾತಿ, ಉದ್ಯೋಗದಲ್ಲಿ ಮೀಸಲಾತಿ ಪಡೆದು ಮಹಿಳೆಯರು ಮುಂದೆ ಬರಲು ಕಾರಣರಾಗಿದ್ದಾರೆ ಎಂದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಕೂಡು ಚಿನ್ನಸ್ವಾಮಿ ಮಾತನಾಡಿ, ಕಷ್ಟದ ಜೀವನವನ್ನು ನಡೆಸಿ ಬಡವರಿಗೆ ವಿದ್ಯಾದಾನ ಮಾಡಿದ ಮಾತೆ ಸಾವಿತ್ರಿ ಬಾಫುಲೆ, 150 ವರ್ಷಗಳ ಹಿಂದೆ ವಿದ್ಯೆಯನ್ನು ಕಲಿಯಲು ಬಹಳ ಕಷ್ಟದ ಕಾಲವಾಗಿತ್ತು. ಅಂತಹ ಸಮಯದಲ್ಲಿ ಜ್ಯೋತಿ ಬಾಫುಲೆ ಅವರಿಗೆ ವಿದ್ಯೆಯನ್ನು ಕಲಿಯಲು ಪ್ರೋತ್ಸಾಹ ಮಾಡಿದರು ಎಂದರು.ಆರಣ್ಯ ಇಲಾಖೆ ನಿವೃತ್ತ ಅಧಿಕಾರಿ ಡಾ.ಆರ್.ರಾಜು ಸಾವಿತ್ರಿ ಬಾಫುಲೆ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಜ್ಞಾನವನ್ನು ಪಡೆಯುವ ವಿಚಾರದಲ್ಲಿ ಪ್ರತಿಯೊಬ್ಬರು ಪ್ರಯತ್ನಿಸಬೇಕಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನವನ್ನು ಸಂಪಾದನೆ ಮಾಡಿ ನಮಗೆ ಹಂಚಿದ್ದಾರೆ. ಸಂವಿಧಾನದಿಂದ ಪ್ರತಿಯೊಬ್ಬರು ಸುಖದಿಂದ ಜೀವನ ನಡೆಸಲು ಸಾಧ್ಯವಾಗಿದೆ ಎಂದು ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ನರಸಿಪುರ ಬೌದ್ದ ವಿಹಾರದ ಬೋಧಿರತ್ನ ಬಂತೇಜಿ ಆರ್ಶಿವಚನ ನೀಡಿದರು, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಪ್ರಸೂತಿ ತಜ್ಞೆ ಡಾ.ರೇಣುಕಾದೇವಿ, ಬಿಇಒ ಸೋಮಣ್ಣೇಗೌಡ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೈಸೂರು ವಿಭಾಗೀಯ ಉಪಾಧ್ಯಕ್ಷ ಲಿಂಗಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಸಾವಿತ್ರಿ ಬಾಫುಲೆ ಸಂಘದ ಜಿಲ್ಲಾಧ್ಯಕ್ಷೆ ಭವಾನಿದೇವಿ, ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ತಾಲೂಕುಗಳ ಅಧ್ಯಕ್ಷ ಎಂ.ಡಿ,ಮಹದೇವಯ್ಯ, ಶಿವರಾಮು, ಗುರುಶಂಕರಯ್ಯ, ಶಂಕರ್‌ಬಾಬು, ಹಾಗೂ ಜಿಲ್ಲಾ ಹಾಗೂ ತಾಲೂಕು ಸಂಘದ ಪದಾಧಿಕರಿಗಳು, ನಿರ್ದೇಶಕರುಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಈ ವೇಳೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.