ಬಹುಸಂಸ್ಕೃತಿಯ ನಾಡಲ್ಲಿ ಹಿಂದಿ ಹೇರಿಕೆ ಸಲ್ಲದು

KannadaprabhaNewsNetwork |  
Published : Oct 19, 2024, 12:20 AM IST
ಫೋಟೋ:೧೭ಕೆಪಿಸೊರಬ-೦೩ : ಸೊರಬ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ತಾಲೂಕು ಆಡಳಿತ, ಪುರಸಭೆ ಹಾಗೂ ಕನ್ನಡಪರ ಸಂಘಟನೆಗಳಿAದ ಸ್ವಾಗತಿಸಲಾಯಿತು. | Kannada Prabha

ಸಾರಾಂಶ

ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಂಡ ಹಿನ್ನೆಲೆ, ಪಟ್ಟಣದ ಪುರಸಭೆ ಮುಂಭಾಗದ ವೃತ್ತದಲ್ಲಿ ತಾಲೂಕು ಆಡಳಿತ, ಪುರಸಭೆ, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಜಾನಪದ ಪರಿಷತ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ಗುರುವಾರ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಕನ್ನಡಪ್ರಭ ವಾರ್ತೆ ಸೊರಬ

ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಂಡ ಹಿನ್ನೆಲೆ, ಪಟ್ಟಣದ ಪುರಸಭೆ ಮುಂಭಾಗದ ವೃತ್ತದಲ್ಲಿ ತಾಲೂಕು ಆಡಳಿತ, ಪುರಸಭೆ, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಜಾನಪದ ಪರಿಷತ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ಗುರುವಾರ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ತಾಲೂಕಿನ ಗಡಿಭಾಗ ಛತ್ರದಹಳ್ಳಿಗೆ ರಥವು ಆಗಮಿಸುತ್ತಿದ್ದಂತೆ ಮಾಲಾರ್ಪಣೆ ಮಾಡುವ ಮೂಲಕ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಸ್ವಾಗತಿಸಿದರು. ಪುರಸಭೆ ಮುಂಭಾಗದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಂ.ಡಿ. ಉಮೇಶ್ ನಾಡದೇವಿ ಭುವನೇಶ್ವರಿ ದೇವಿಗೆ ಪುಷ್ಪಾರ್ಷನೆ ಮಾಡಿದರು. ಪುರಸಭೆ ಮುಂಭಾಗದ ವೃತ್ತದಿಂದ ಮುಖ್ಯರಸ್ತೆಯಲ್ಲಿ ರಥವು ಗುಡ್ಡೆಕೊಪ್ಪದ ಶ್ರೀ ಸಿದ್ಧರಾಮೇಶ್ವರ ಯುವಕ ಸಂಘದ ಡೊಳ್ಳು ಕುಣಿತದೊಂದಿಗೆ ಸಂಚರಿಸಿತು.ಈ ಸಂದರ್ಭದಲ್ಲಿ ಸಮಾಜ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿ, ಕನ್ನಡ ನಾಡು, ನುಡಿಗೆ ಇರುವ ಇತಿಹಾಸ ಅರಿಯಲು ಇದೊಂದು ಉತ್ತಮ ಕಾರ್ಯವಾಗಿದೆ. ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು ಸುವರ್ಣ ವರ್ಷಾಚರಣೆಯ ಸಂದರ್ಭದಲ್ಲಿ ಕರುನಾಡಿನ ಹಿರಿಯರನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕಿದೆ. ರಥವು ತಾಲೂಕಿಗೆ ಆಗಮಿಸಿರುವುದು ಅತ್ಯಂತ ಸಂತಸದ ವಿಷಯವಾಗಿದೆ ಎಂದರು. ಕರ್ನಾಟಕದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕನ್ನಡಿಗರು ಸಾಧಿಸಿದ್ದಾರೆ. ಬಹುಸಂಸ್ಕೃತಿ ನಾಡಿನಲ್ಲಿ ಹಿಂದಿ ಹೇರಿಕೆ ಸಲ್ಲದು. ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಶಾಸ್ತ್ರೀಯ ಭಾಷಾ ಸ್ಥಾನಮಾನವು ಲಭಿಸಿದೆ. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರು ಶ್ರಮಿಸಬೇಕು. ಸರ್ಕಾರಗಳು ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದರು. ತಾಪಂ ಇಒ ಡಾ. ಎನ್.ಆರ್. ಪ್ರದೀಪ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ವಿನಯ್ ಪಾಟೀಲ್, ಬಿಇಒ ಆರ್, ಪುಷ್ಪಾ, ಸಹಾಯಕ ಕೃಷಿ ನಿರ್ದೇಶಕ ಕೆ.ಜಿ. ಕುಮಾರ್, ವಲಯ ಅರಣ್ಯಾಧಿಕಾರಿ ಜಾವೇದ್ ಭಾಷಾ ಅಂಗಡಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗೃಹರಕ್ಷಕದಳದ ನಿವೃತ್ತ ಘಟಕಾಧಿಕಾರಿ ಬಿ. ರೇವಣಪ್ಪ, ಘಟಕಾಧಿಕಾರಿ ಎಚ್.ಎಂ. ಪ್ರಶಾಂತ್, ಕಸಾಪ ಅಧ್ಯಕ್ಷ ಶಿವಾನಂದ, ಮಾಜಿ ಅಧ್ಯಕ್ಷ ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ , ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಎಸ್.ಎಂ. ನೀಲೇಶ್, ಸೇರಿದಂತೆ ಮತ್ತಿತರರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ