ಹೆಬ್ರಿ: ಜಿಲ್ಲಾಮಟ್ಟದ ಸಂಜೀವಿನಿ ಮಾರಾಟ ಮೇಳ
ಮಹಿಳೆಯರು ತಮ್ಮ ಆರ್ಥಿಕ ಮಟ್ಟ ಸುಧಾರಣೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮೂಲಕ ಸಂಘಟಿತರಾಗಿ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್ ಹೇಳಿದರು.
ಅವರು ಕೌಶಾಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯಿತಿ ಉಡುಪಿ, ಹೆಬ್ರಿ ತಾಲೂಕು ಪಂಚಾಯಿತಿ ಹೆಬ್ರಿ, ಗ್ರಾಮ ಪಂಚಾಯಿತಿ ಹೆಬ್ರಿ ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹೆಬ್ರಿ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಸಂಜೀವಿನಿ ಮಾರಾಟ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ್ ಟಿ.ಎಂ. ಮಾತನಾಡಿ, ಭಾರತದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳೆಯರಿಗೆ ಧೈರ್ಯ ತುಂಬಿದರು.
ಹೆಬ್ರಿ ಗ್ರಾಮ ಪಂ ಅಧ್ಯಕ್ಷ ತಾರಾನಾಥ ಬಂಗೇರ ಅಧ್ಯಕ್ಷ ತೆ ವಹಿಸಿದರು. ಕೆನರಾ ಬ್ಯಾಂಕ್ ಜಿಲ್ಲಾ ಮುಖ್ಯ ಪ್ರಬಂಧಕ ಹರೀಶ್ ಜಿ. ಬ್ರಹ್ಮಾವರ, ರುಡ್ ಸೆಡ್ ನಿರ್ದೇಶಕ ಲಕ್ಷ್ಮೀಶ್ ಮಾತನಾಡಿದರು. ಕಾಪು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿಸಿಲ್ವಾ, ಹೆಬ್ರಿ ಗ್ರಾ.ಪಂ.ನ ಸದಾಶಿವ ಸೇರ್ವೆಗಾರ್ ಉಪಸ್ಥಿತರಿದ್ದರು.
ಸಂಜೀವಿನಿ ಮಹಿಳೆಯರು ಸೇರಿದಂತೆ ಅತಿಥಿಗಳನ್ನು ಚೆಂಡೆ ಹಾಗೂ ಪೂರ್ಣ ಕುಂಭ ಮೂಲಕ ಹೆಬ್ರಿ ಬಸ್ ನಿಲ್ದಾಣದಿಂದ ರಾಮಮಂದಿರ ವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು.