ಹುಬ್ಬಳ್ಳಿ:
ಇಲ್ಲಿನ ತಾಲೂಕು ಆಡಳಿತಸೌಧದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ವ್ಯವಸ್ಥೆ ಬಲಿಷ್ಠಗೊಂಡಿದೆ. ಫೆ.8ರಂದು ಬೆಣ್ಣೆಹಳ್ಳ ಪ್ರವಾಹ ತಡೆ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಒಟ್ಟಾರೆಯಾಗಿ ಸುಮಾರು ₹350 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ. ನವಲಗುಂದ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವಲ್ಲಿ ಶ್ರಮಿಸಲಾಗುವುದು ಎಂದರು.ಈ ವೇಳೆ ಹಿಂದುಳಿದ ವರ್ಗಗಳ ಆಯೋಗದಿಂದ ನಡೆದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- 2025ರಲ್ಲಿ ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಶಹರ ತಹಸೀಲ್ದಾರ್ ಮಹೇಶ ಭಗವಂತ ಗಸ್ತೆ, ಗ್ರೇಡ್ 2 ತಹಸೀಲ್ದಾರ್ ಶಿವಾನಂದ ಹೆಬ್ಬಳ್ಳಿ, ತಾಪಂ ಇಒ ಡಾ. ರಾಮಚಂದ್ರ ಹೊಸಮನಿ, ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ಗ್ರಾಮೀಣ ಬಿಇಒ ಉಮೇಶ ಬೊಮ್ಮಕ್ಕನವರ ಸೇರಿದಂತೆ ಹಲವರಿದ್ದರು.