ಪಠ್ಯದೊಂದಿಗೆ ಸಾಮಾನ್ಯ ಜ್ಞಾನ ವೃದ್ಧಿ: ಪಾರ್ವತಿ ಬೋಪಯ್ಯ

KannadaprabhaNewsNetwork |  
Published : Mar 09, 2026, 03:00 AM IST
ದತ್ತಿ ಕಾರ್ಯಕ್ರಮದಲ್ಲಿ ಸನ್ಮಾನ | Kannada Prabha

ಸಾರಾಂಶ

ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲೆಯ ಹಿರಿಯ ದಾನಿ ಕೈಬುಲಿರ ಪಾರ್ವತಿ ಬೋಪಯ್ಯ ನುಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲೆಯ ಹಿರಿಯ ದಾನಿ ಕೈಬುಲಿರ ಪಾರ್ವತಿ ಬೋಪಯ್ಯ ನುಡಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹುದಿಕೇರಿ ಲಿಟಲ್ ಫ್ಲವರ್ಸ್ ಶಾಲೆ ಆಶ್ರಯದಲ್ಲಿ ನಡೆದ ಕೈಬುಲಿರ ಬೋಪಯ್ಯ ಸ್ಮಾರಕ ನಡೆದ ದತ್ತಿ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಕೊಡಗು ಜಿಲ್ಲೆಯ 10ನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ತಾಲೂಕಿನ ನೀಡ್ತಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ ಎಸ್ ಪೂರ್ವಿಕ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ವಿದ್ಯಾರ್ಥಿಗಳ ಪ್ರತಿಭೆಗೆ ಸರಿಯಾದ ಮಾರ್ಗದರ್ಶನ ದೊರೆತರೆ ಹಳ್ಳಿಗಾಡಿನ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟಿನಲ್ಲಿ ಹೆಸರು ಮಾಡಲು ಸಾಧ್ಯವಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಲಿಟಲ್ ಫ್ಲವರ್ಸ್ ಶಾಲೆಯ ಕಾರ್ಯದರ್ಶಿ ಆಶಾ ಜ್ಯೋತಿ ಸತೀಶ್ ಮಾತನಾಡಿ ಸಾಹಿತ್ಯ ಪರಿಷತ್ ಉತ್ತಮ ಕಾರ್ಯಕ್ರಮ ಆಯೋಜಿಸಿದೆಎಂದರು.

ದತ್ತಿ ಆಶಯದಂತೆ ಶಿಕ್ಷಣದ ಅವಶ್ಯಕತೆಯ ಕುರಿತು ಮಾತನಾಡಿದ ಪೊನ್ನಂಪೇಟೆ ಕೆ.ಪಿ.ಎಸ್ ಪ್ರೌಢಶಾಲೆಯ ಅಧ್ಯಾಪಕಿ ನಳಿನಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾಭ್ಯಾಸದ ಅವಶ್ಯಕತೆ ಇದೆ, ಕಲಿತಷ್ಟು ಸಾಲುವುದಿಲ್ಲ. ವಿದ್ಯಾರ್ಥಿಗಳು ಪಠ್ಯೇತರ ವಿಚಾರಗಳನ್ನು ಕೂಡ ಅಭ್ಯಾಸ ಮಾಡುವ ಅಗತ್ಯವಿದೆ ಎಂದರು.

ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಲ್ಲಚಂದ ಪ್ರಮೋದ್ ಗಣಪತಿ ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಉಳುವಂಗಡ ಕಾವೇರಿ ಉದಯ್ ಶಾಲೆಯ ಮುಖ್ಯೋಪಾಧ್ಯಾಯನಿ ಕೆ.ಎಲ್ ರಶ್ಮಿ ಮಾತನಾಡಿದರು. 10ನೇ ತರಗತಿಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಕು. ಪೂರ್ವಿಕ ಅವರನ್ನು ಸನ್ಮಾನಿಸಲಾಯಿತು ದತ್ತಿದಾನಿಗಳಾದ ಕೈಬುಲಿರ ಪಾರ್ವತಿ ಬೋಪಯ್ಯ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಸರ್ವೇ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಾನಂಗಡ ಅರುಣ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾನಂಗಡ ಅರುಣ್ ಮಾತನಾಡಿ ಹಳ್ಳಿಯ ಶಾಲೆಗಳಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ಅನುವು ಮಾಡಿಕೊಟ್ಟಿದೆ ಇದರಿಂದ ಹಳ್ಳಿ ಶಾಲೆಯ ವಿದ್ಯಾರ್ಥಿಗಳಿಗೆ ಒಂದು ವಿಶೇಷ ಅನುಭವ ಮತ್ತು ಶೈಕ್ಷಣಿಕ ಪ್ರಗತಿ ಆಗುತ್ತಿದೆ ಎಂದರು. ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳ ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲ್ಲೂಕು ಕ.ಸಾ.ಪ. ಗೌರವ ಕಾರ್ಯದರ್ಶಿ ಶೀಲಾ ಬೋಪಣ್ಣ, ನಿರ್ದೇಶಕ ಟಿ ಆರ್ ವಿನೋದ್, ಸದಸ್ಯರಾದ ಉಳುವಂಗಡ ಉದಯ್, ಅಜಯ್ ಉಪಸ್ಥಿತರಿದ್ದರು.

ಅಧ್ಯಾಪಕಿ ಪವಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು ಅಧ್ಯಾಪಕಿ ನವ್ಯ ಸ್ವಾಗತಿಸಿದರು. ಅಧ್ಯಾಪಕಿ ಪಾರ್ವತಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳಲ್ಲಿ ಕ್ರಿಯಾಶೀಲರಾಗಿ
ಬಸವನಬಾಗೇವಾಡಿಯಲ್ಲಿ ಅದ್ಧೂರಿ ರಂಗಪಂಚಮಿ