ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಡಾ. ಧನಂಜಯ ಸರ್ಜಿ

KannadaprabhaNewsNetwork |  
Published : Sep 30, 2024, 01:22 AM ISTUpdated : Sep 30, 2024, 01:23 AM IST
ಪೋಟೋ: 29ಎಸ್‌ಎಂಜಿಕೆಪಿ02ಶಿವಮೊಗ್ಗದ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಭಾನುವಾರ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿ ನಾವೆಲ್ಲ ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಕರೆ ನೀಡಿದರು.

ಜಿಲ್ಲಾಡಳಿತ, ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಭಾನುವಾರ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 2024-25ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದಲ್ಲದೆ, ಪರಿಪೂರ್ಣ ವಿದ್ಯೆ ಹೊರತಾಗಿ ಅತ್ಯುನ್ನತ ಸಾಧನೆಗೊಂದು ಅವಕಾಶ ಲಭ್ಯವಿದೆ. ಹಾಗಾಗಿ ಯುವ ಜನತೆ ದೈನಂದಿನ ಜೀವನದ ಶೈಲಿಯಲ್ಲಿ ಕ್ರೀಡೆ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ವಿಭಾಗದಲ್ಲಿ ಬಾಡ್ಮಿಂಟನ್ ,ಈಜು, ಟೆನ್ನಿಸ್ , ಹಾಕಿ, ಜುಡೋ ಮತ್ತು ಯೋಗ ಸ್ಪರ್ಧೆಗಳನ್ನು ನಗರದ ಒಳಾಂಗಣ ಕ್ರೀಡಾಂಗಣ, ಕ್ರೀಡಾ ಸಂಕೀರ್ಣ ಮತ್ತು ವಾಜಪೇಯಿ ಬಡಾವಣೆಯಲ್ಲಿ ಆಯೋಜಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿತ್ರದುರ್ಗ, ತುಮಕೂರು, ರಾಮನಗರ, ಚಿಕ್ಕ ಬಳ್ಳಾಪುರ ಜಿಲ್ಲೆಯ ಸುಮಾರು 600ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಯವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಹಿರಿಯ ಯೋಗ ತರಬೇತುದಾರಾದ ವನಶ್ರಿ, ಮಂಜಪ್ಪ ,ಕ್ರೀಡಾಪಟುಗಳು, ಕ್ರೀಡಾಸಕ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯವಾಗಿ ಗೂಗ್ಲಿ ಹಾಕ್ಬೇಕು, ಇಲ್ಲದಿದ್ರೆ ಯಶಸ್ಸು ಸಿಗಲ್ಲ: ಸತೀಶ್‌
ಮರ್ಯಾದಾ ಹತ್ಯೆಯಂಥ ಕೃತ್ಯ ತಡೆಗೆ ವಿಶೇಷ ಕಾನೂನು : ಸಿಎಂ