ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ
ತಾಲೂಕಿನ ನಾಗೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಜೀಂ ಪ್ರೇಮ್‌ಜಿ ಫೌಂಡೇಶನ್ ಜಿಲ್ಲಾ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ನಾಗೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಮುತ್ತಗಿ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಮೇಳದಲ್ಲಿ ಮಾತನಾಡಿದರು. ಕಲಿಕಾ ಮೇಳದಿಂದ ಮಕ್ಕಳಿಗೆ ವಿಷಯದ ಸರಳತೆ ಉಂಟಾಗುತ್ತದೆ. ಮಕ್ಕಳಲ್ಲಿ ಆಟದೊಂದಿಗೆ ಪಾಠ ಎನ್ನುವಂತೆ ವಿಷಯದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಈ ಕಲಿಕಾ ಮೇಳ ಮಕ್ಕಳಲ್ಲಿ ಹೊಸ ಹುಮ್ಮಸ್ಸು ಮೂಡಿಸಲಿದೆ ಎಂದರು.
ಶಿಕ್ಷಕರು ಪಾಠೋಪಕರಣ ಬಳಕೆ ಮಾಡಿ ಬೋಧನೆ ಮಾಡಿದರೆ ಉತ್ತಮ ಶಿಕ್ಷಣ ಕೊಡಲು ಸಾಧ್ಯ. ಕಲಿಕಾ ಮೇಳವು ಪ್ರತಿಯೊಂದು ಶಾಲೆಗೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಪ್ರೇರಣೆಯಾಗಲಿದೆ ಎಂದು ಹೇಳಿದರು.ಮುಖ್ಯಗುರುಗಳ ಸಂಘದ ಅಧ್ಯಕ್ಷ ಎಂ.ಬಿ.ತೋಟದ ಮಾತನಾಡಿ, ಒಂದು ಮಗು ಪ್ರತ್ಯಕ್ಷವಾಗಿ ಮಾಡಿ ಕಲಿತಿರುವುದಕ್ಕಿಂತ ಮೇಳದಲ್ಲಿ ನೋಡಿ ಕಲಿಯುವುದು ಬಹಳಷ್ಟಿದೆ. ಇಂತಹ ಮೇಳಗಳು ಗ್ರಾಮೀಣ ಭಾಗದ ಮಕ್ಕಳಿಗೆ ಅಗತ್ಯವಾಗಿದೆ. ನೋಡಿ ಕಲಿ, ಮಾಡಿ ತಿಳಿ, ಕೇಳಿ ಕಲಿ ಎಂಬ ಉಕ್ತಿಯಂತೆ ಬೋಧನೆ ನಡೆಯಬೇಕೆಂದರು.
ಸಿಆರ್‌ಸಿ ಮಹೇಶ ಪೂಜಾರಿ ಪ್ರಾಸ್ತವಿಕ ಮಾತನಾಡಿದರು. ಶರಣಬಸು ಮಿಣಜಗಿ ಸ್ವಾಗತಿಸಿದರು. ಸಿ.ಎಸ್.ಹಡಪದ ನಿರೂಪಿಸಿದರು. ಎಸ್.ವ್ಹಿ.ಕಾಳಗಿ ವಂದಿಸಿದರು. ಮುತ್ತಗಿ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯಗುರುಗಳು, ಸಹಶಿಕ್ಷಕರು ತಮ್ಮ ಮಕ್ಕಳೊಂದಿಗೆ ವಿವಿಧ ಮಾದರಿ, ಪಾಠೋಪಕರಣಗಳೊಂದಿಗೆ ಭಾಗವಹಿಸಿದ್ದರು.