ಶಿಕ್ಷಣದ ಗುಣಮಟ್ಟ ಹೆಚ್ಚಳ ಶಿಕ್ಷಕರ ಕೈಯಲ್ಲಿ: ಶಾಸಕ ರಮೇಶ ಬಂಡಿಸಿದ್ದೇಗೌಡ

KannadaprabhaNewsNetwork |  
Published : Jun 01, 2025, 02:34 AM IST
31ಕೆಎಂಎನ್ ಡಿ19 | Kannada Prabha

ಸಾರಾಂಶ

ಸರ್ಕಾರ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಸಮವಸ್ತ್ರ, ಶೂ, ಬಿಸಿಯೂಟ, ಸ್ಕಾಲರ್ ಶಿಪ್ ಸೇರಿದಂತೆ ಹಲವು ಸೌಕರ್ಯಗಳ ನೀಡುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಶಿಕ್ಷಣದ ಗುಣಮಟ್ಟ ಹೆಚ್ಚು ಮಾಡುವುದು ಶಿಕ್ಷಕರ ಕೈಯಲ್ಲಿದೆ ಎಂದು ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ಪಟ್ಟಣದ ಶ್ರೀರಂಗನಾಥ ದೇವಾಲಯದ ಆವರದಲ್ಲಿ ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಪುರಸಭಾ ವ್ಯಾಪ್ತಿಯ ಪಟ್ಟಣ ಹಾಗೂ ಗಂಜಾಂನ ಸರ್ಕಾರಿ ಶಾಲಾ ಮಕ್ಕಳಿಗೆ ಶಾಸಕರು ಸಮವಸ್ತ್ರ, ಶಾಲಾ ಬ್ಯಾಗ್ ಹಾಗೂ ನೋಟ್ ಬುಕ್ ವಿತರಿಸಿ ಮಾತನಾಡಿದರು.

ಸರ್ಕಾರ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಸಮವಸ್ತ್ರ, ಶೂ, ಬಿಸಿಯೂಟ, ಸ್ಕಾಲರ್ ಶಿಪ್ ಸೇರಿದಂತೆ ಹಲವು ಸೌಕರ್ಯಗಳ ನೀಡುತ್ತಿದೆ ಎಂದರು.

ಶಿಕ್ಷಣದ ಗುಣ ಮಟ್ಟವನ್ನು ಹೆಚ್ಚು ಮಾಡುವುದು ಶಿಕ್ಷಕರ ಕೈಯಲ್ಲಿದೆ. ತಮ್ಮ ಮನ ಸಾಕ್ಷಿಯಿಂದ ಮಕ್ಕಳಿಗೆ ಶಿಸ್ತು, ನಿಯಮ ಕಲಿಸುವ ಜೊತೆಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಪ್ರಜೆಗಳನ್ನಾಗಿ ಮಾಡಬೇಕಿದೆ ಎಂದರು.

ಪುರಸಭೆ ವ್ಯಾಪ್ತಿಯಲ್ಲಿನ ಎಲ್ಲಾ ಶಾಲೆಗಳ 1 ರಿಂದ 10ನೇತರಗತಿವರೆಗೆ ಒಟ್ಟು 630 ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ಹಾಗೂ ನೋಟ್‌ಬುಕ್ ವಿತರಿಸಲಾಯಿತು.

ಈ ವೇಳೆ ತಹಶೀಲ್ದಾರ್ ಪರುಶುರಾಮ್ ಸತ್ತಿಗೇರಿ, ತಾಪಂ ಇಒ ವೇಣು, ಬಿಇಒ ಮಹೇಶ್, ಮುಖ್ಯಾಧಿಕಾರಿ ಎಂ.ರಾಜಣ್ಣ, ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್ ದಿನೇಶ್, ಸದಸ್ಯರಾದ ದಯಾನಂದ್, ಕೃಷ್ಣಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ ಶ್ರೀನಿವಾಸ್ ಸೇರಿದಂತೆ ಶಿಕ್ಷಕರು ಇತರರು ಉಪಸ್ಥಿತರಿದ್ದರು.ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ:

ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಮೊರಾಜಿ ದೇಸಾಯಿ ವಸತಿ ಶಾಲೆ ಶಿಕ್ಷಕರು, ವಾರ್ಡನ್ ಹಾಗೂ ಸಿಬ್ಬಂದಿಗಳು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವನ್ನು ಸಂಬಂಧಪಟ್ಟ ಇಲಾಖೆಗಳ ಅಧೀನಕ್ಕೆ ಒಪ್ಪಿಸಬೇಕು ಅಥವಾ ಅದಕ್ಕೆ ಪ್ರತ್ಯೇಕ ನಿರ್ದೇಶನಾಲಯ ರಚಿಸುವಂತೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

PREV

Recommended Stories

ಮಾಲೇಗಾಂವ ಸ್ಫೋಟ ತೀರ್ಪು; ಸಂಭ್ರಮಾಚರಣೆ
ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಷಡ್ಯಂತ್ರ: ಪ್ರಮೋದ ಮುತಾಲಿಕ