30 ವರ್ಷದಲ್ಲಿ ಜಿಗಜಿಣಗಿ ಸಾಧನೆ ಶೂನ್ಯ

KannadaprabhaNewsNetwork |  
Published : Apr 18, 2024, 02:24 AM IST
ಕೊಲ್ಹಾರ ಪಟ್ಟಣದಲ್ಲಿ ನಡೆದ ವಿಜಯಪುರ ಲೋಕಸಭಾ ಚುನಾವಣೆ ಪ್ರಚಾರ ನಿಮಿತ್ಯ ಹಮ್ಮಿಕೊಂಡ ಕೊಲ್ಹಾರ ಬ್ಲಾಕ್ ವಿಧಾನಸಭಾ ಮತಕ್ಷೇತ್ರದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿ ಮಾತನಾಡಿದರು.ಈ ವೇಳೆ ಪ್ರದೇಶ ಕಾಂಗ್ರೆಸ ಸಮಿತಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಪಟ್ಟಣ ಪಂಚಾಯತಿ ಸದಸ್ಯ ಚನಮಲ್ಲಪ್ಪ ಗಿಡ್ಡಪ್ಪಗೋಳ,ಮಾಜಿ ಜಿ.ಪಂ ಸದಸ್ಯ ಕಲ್ಲು ದೇಸಾಯಿ, ಮುಖಂಡರಾದ ಶ್ರೀಶೈಲ ಪತಂಗಿ,ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಆರ್.ಬಿ.ಪಕಾಲಿ,ಎಸ್.ಆರ್.ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದಂತೆ ಈ ಬಾರಿ ಕೂಡಾ ಬಸವನ ಬಾಗೇವಾಡಿ ಮತಕ್ಷೇತ್ರದ ಜನ ಮೂವತ್ತು ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಜು ಆಲಗೂರವರನ್ನು ಗೆಲ್ಲಿಸುವ ಮೂಲಕ ಇಡೀ ಜಿಲ್ಲೆಯಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದ ಜನ ಅವರ ಗೆಲುವಿಗೆ ಕಾರಣರಾಗಬೇಕು ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಕೊಲ್ಹಾರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದಂತೆ ಈ ಬಾರಿ ಕೂಡಾ ಬಸವನ ಬಾಗೇವಾಡಿ ಮತಕ್ಷೇತ್ರದ ಜನ ಮೂವತ್ತು ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಜು ಆಲಗೂರವರನ್ನು ಗೆಲ್ಲಿಸುವ ಮೂಲಕ ಇಡೀ ಜಿಲ್ಲೆಯಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದ ಜನ ಅವರ ಗೆಲುವಿಗೆ ಕಾರಣರಾಗಬೇಕು ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಕಲ್ಲು ದೇಸಾಯಿವರ ಮನೆ ಹತ್ತಿರ ವಿಜಯಪುರ ಲೋಕಸಭಾ ಚುನಾವಣೆ ಪ್ರಚಾರ ನಿಮಿತ್ತ ಹಮ್ಮಿಕೊಂಡ ಕೊಲ್ಹಾರ ಬ್ಲಾಕ್ ವಿಧಾನಸಭಾ ಮತಕ್ಷೇತ್ರದ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿ ಅಧಿಕಾರದಲ್ಲಿದ್ದರೂ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಇವತ್ತು ಬೇರೆ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಹೋಗಲಿಕ್ಕೆ ನಾಲ್ಕೈದು ರೈಲ್ವೆಗಳಿವೆ. ಆದರೆ ನಮ್ಮಲ್ಲಿಲ್ಲ, ಸಂಚರಿಸಲಿಕ್ಕೆ ಸರಿಯಾದ ರಸ್ತೆಗಳಿಲ್ಲ, ಕುಡಿಯುವುದಕ್ಕೆ ನೀರು ಕೊಡಲಿಕ್ಕೆ ಆಗಲಿಲ್ಲ. ಆದ್ದರಿಂದ ಈ ಬಾರಿ ಅವರನ್ನು ಸೋಲಿಸಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಬರುವ ಸಂಸತ್‌ ಭವನದ ಅಧಿವೇಶನದಲ್ಲಿ ನಮ್ಮ ವಿಜಯಪುರದ ಕೃಷ್ಣಾ ಮೇಲ್ದಂಡೆ ಯೋಜನೆ (ಯು.ಕೆ.ಪಿ)ಯ ಬಗ್ಗೆ ಇವರಿಂದ ಕೇಳುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಆಲಗೂರ ಮಾತನಾಡಿ, ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ತ್ಯಾಗ, ಬಲಿದಾನ ಮಾಡಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಣ್ಣ ಉತ್ಪನ್ನವನ್ನು ಉತ್ಪಾದನೆ ಮಾಡುವುದಕ್ಕೆ ಸಾಧ್ಯವಿರಲಿಲ್ಲ. ವಿದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿಯಿತ್ತು. ಆಗಿನ ಪ್ರಧಾನ ಮಂತ್ರಿ ನೆಹರು ಅವರ ದೂರದೃಷ್ಟಿಯಿಂದ ರಸ್ತೆ, ವಿದ್ಯುತ್, ನೀರು, ಶಾಲಾ ಕಾಲೇಜು, ವಿಶ್ವವಿದ್ಯಾಲಯ, ಅಣೆಕಟ್ಟು ಹೀಗೆ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದು ನಿರ್ಮಾಣ ಮಾಡಿದರು. ಆದರೆ ಹತ್ತು ವರ್ಷ ಅಧಿಕಾರದಲ್ಲಿದ್ದ ಮೋದಿಯವರು ಒಂದು ಡ್ಯಾಂ ಕಟ್ಟಲು ಆಗಲಿಲ್ಲ, ಕಪ್ಪುಹಣ ತರಲಿಲ್ಲ, 2 ಕೋಟಿ ಉದ್ಯೋಗ ಕೊಡಲಿಲ್ಲ ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡ ಎಸ್.ಆರ್.ಪಾಟೀಲ, ಎಸ್.ಬಿ.ಪತಂಗಿ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ ಸಮಿತಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಪಟ್ಟಣ ಪಂಚಾಯತಿ ಸದಸ್ಯ ಚನಮಲ್ಲಪ್ಪ ಗಿಡ್ಡಪ್ಪಗೋಳ, ಮಾಜಿ ಜಿ.ಪಂ ಸದಸ್ಯ ಕಲ್ಲು ದೇಸಾಯಿ, ಮುಖಂಡರಾದ ಶ್ರೀಶೈಲ ಪತಂಗಿ, ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಆರ್.ಬಿ.ಪಕಾಲಿ, ಎಸ್.ಆರ್.ಪಾಟೀಲ, ಉಸ್ಮಾನ್ ಪಟೇಲ, ತಾನಾಜಿ ನಾಗರಾಳ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ