ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಕೆಯೊಂದೇ ಅಭಿವೃದ್ಧಿಯ ಸಾಧನ

KannadaprabhaNewsNetwork |  
Published : Aug 05, 2025, 11:45 PM IST
4ಎಚ್ಎಸ್ಎನ್15 :  | Kannada Prabha

ಸಾರಾಂಶ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಹೊಸ ಹೊಸ ಆವಿಷ್ಕಾರಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ಇದನ್ನು ಅರಿತುಕೊಂಡು ವಿದ್ಯಾರ್ಥಿಗಳು ಹಾಗೂ ಪದವೀಧರರು ನಿರಂತರ ಕಲಿಕೆಯಿಂದ ತಮ್ಮ ಜ್ಞಾನಾರ್ಜನೆಯನ್ನು ಮಾಡಿಕೊಂಡು ಸ್ಪರ್ಧಾ ಲೋಕಕ್ಕೆ ಕಾಲಿರಿಸಬೇಕು ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆನಂದ್ ಶಾರದ ದೇಶಪಾಂಡೆ ತಿಳಿಸಿದರು. ನಿಮ್ಮ ಬುದ್ಧಿಶಕ್ತಿಯಿಂದ ಹಲವು ಆಯಾಮಗಳಲ್ಲಿ ಯೋಚಿಸಿ, ಆಗ ನಿಮ್ಮ ಮುಂದೆ ಅವಕಾಶಗಳು ತೆರೆದುಕೊಳ್ಳುತ್ತವೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸೃಷ್ಟಿಸಿಕೊಂಡು ವೈಯಕ್ತಿಕ ಬದುಕನ್ನು ಕಟ್ಟಿಕೊಳ್ಳಿ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಹೊಸ ಹೊಸ ಆವಿಷ್ಕಾರಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ಇದನ್ನು ಅರಿತುಕೊಂಡು ವಿದ್ಯಾರ್ಥಿಗಳು ಹಾಗೂ ಪದವೀಧರರು ನಿರಂತರ ಕಲಿಕೆಯಿಂದ ತಮ್ಮ ಜ್ಞಾನಾರ್ಜನೆಯನ್ನು ಮಾಡಿಕೊಂಡು ಸ್ಪರ್ಧಾ ಲೋಕಕ್ಕೆ ಕಾಲಿರಿಸಬೇಕು ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆನಂದ್ ಶಾರದ ದೇಶಪಾಂಡೆ ತಿಳಿಸಿದರು.

ಅವರು ನಗರದ ರಾಜೀವ್ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಪವನಪುತ್ರ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ೧೪ನೇ ಪದವಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಪದವೀಧರರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು. ಪದವೀಧರರು ತಮ್ಮ ವೃತ್ತಿ ಕ್ಷೇತ್ರದಲ್ಲಿ ಹಾಗೂ ಗೆಳೆಯರ ಬಳಗದಲ್ಲಿ ಉತ್ತಮ ಸಂಪರ್ಕ ಇಟ್ಟುಕೊಂಡು ಜಗತ್ತಿನ ಎಲ್ಲಾ ಭಾಗಗಳಲ್ಲಿ ಆಗುತ್ತಿರುವ ತಂತ್ರಜ್ಞಾನದ ಸಂಶೋಧನೆಗಳ ಬಗ್ಗೆ ಮಾಹಿತಿ ಕಲೆ ಹಾಕಿ. ನಿಮ್ಮ ಬುದ್ಧಿಶಕ್ತಿಯಿಂದ ಹಲವು ಆಯಾಮಗಳಲ್ಲಿ ಅದರತ್ತ ಯೋಚಿಸಿ. ಆಗ ನಿಮ್ಮ ಮುಂದೆ ಅವಕಾಶಗಳು ತೆರೆದುಕೊಳ್ಳುತ್ತವೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸೃಷ್ಟಿಸಿಕೊಂಡು ವೈಯಕ್ತಿಕ ಬದುಕನ್ನು ಕಟ್ಟಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ. ಎನ್. ರತ್ನ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ ಮುಂದಿನ ಉಜ್ವಲ ಭವಿಷ್ಯಕ್ಕೆ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪಿ. ಕೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಡಾ. ರಂಜಿತ್ ರಾಜೀವ್, ಎಲ್ಲಾ ವಿಭಾಗದ ಡೀನ್‌ಗಳು, ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ