ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತಿನಲ್ಲಿ ಕೇವಲ ಪುಸ್ತಕದ ಬದುಕು ಸಾಕಾಗುವುದಿಲ್ಲ. ವಿದ್ಯಾರ್ಥಿನಿಯರು ಪಠ್ಯದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಇದರಿಂದ ನಾಯಕತ್ವ ಗುಣ ಹಾಗೂ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಕರ್ನಾಟಕದ ಸಾಂಸ್ಕೃತಿಕ ಪರಂಪರೆಯು ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಯಕ್ಷಗಾನ ಹೀಗೆ ವೈವಿಧ್ಯಮಯವಾದ ಸಂಪತ್ ಭರಿತವಾದದ್ದು, ಈ ಪರಂಪರೆಯು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.ಎನ್‌ಎಸ್‌ಎಸ್ ಹಾಗೂ ಕ್ರೀಡೆಗಳು ಯುವ ಜನರಲ್ಲಿ ಶ್ರಮದ ಮಹತ್ವ ಹಾಗೂ ಪರಸ್ಪರ ಸಹಕಾರ ಮನೋಭಾವನೆ, ದೇಶ ಪ್ರೇಮವನ್ನು ಬೆಳೆಸುತ್ತದೆ. ಯುವತಿಯರು, ಧೈರ್ಯ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜಾಗೃತಿಯನ್ನು ಮೈಗೂಢಿಸಿಕೊಳ್ಳಬೇಕು. ಕಾನೂನಿನ ಅರಿವು ಹಾಗೂ ಸಮಾಜದ ಬಗ್ಗೆ ಕಾಳಜಿ ಹೊಂದಿ ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀ ನಟರಾಜ ಪ್ರತಿಷ್ಠಾನದ ಆಡಳಿತಾಧಿಕಾರಿ ಎಂ. ಶಿವರಾಜು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಮೌಲ್ಯಾಧಾರಿತ ಶಿಕ್ಷಣ ಪ್ರಮುಖವಾದುದು. ಪಠ್ಯ ಪುಸ್ತಕದ ಜ್ಞಾನದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮನಸ್ಸುನ್ನು ಉಲ್ಲಾಸವಾಗಿಡಲು ಹಾಗೂ ಸೃಜನಶೀಲತೆಯನ್ನು ಹೊರ ಹಾಕಲು ಸಹಾಯಕವಾಗುತ್ತದೆ ಎಂದರು.
ಜಯಲಕ್ಷ್ಮಿ ಪ್ರಾರ್ಥಿಸಿದರು, ನಿತ್ಯ ಸ್ವಾಗತಿಸಿದರು. ನಾಗಸಿರಿ ವಂದಿಸಿದರು, ರೇವತಿ ನಿರೂಪಿಸಿದರು, ವಿದ್ಯಾರ್ಥಿನಿಯರ ಸಾಂಸ್ಕೃತಿಕ ಸ್ಪರ್ಧೆಗಳಾದ ಕಿರುನಾಟಕ, ಏಕವ್ಯಕ್ತಿ ನೃತ್ಯ ಸ್ಪರ್ಧೆ ಹಾಗೂ ಸಮೂಹ ನೃತ್ಯ ಸ್ಪರ್ಧೆ ನಡೆಯಿತು.