ಚಾಮರಾನಗರದಲ್ಲಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷೆ ಅಧಿಕಾರ ಸ್ವೀಕಾರ

KannadaprabhaNewsNetwork | Published : Sep 12, 2024 2:03 AM

ಸಾರಾಂಶ

ಚಾಮರಾಜನಗರದ ನಗರಸಭೆಯ ನೂತನ ಅಧ್ಯಕ್ಷ ಎಸ್.ಸುರೇಶ್, ಉಪಾಧ್ಯಕ್ಷೆ ಮಮತ ಬಾಲಸುಬ್ರಹ್ಮಣ್ಯ ಬುಧವಾರ ಅಧಿಕಾರ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಇಲ್ಲಿನ ನಗರಸಭೆಯ ನೂತನ ಅಧ್ಯಕ್ಷ ಎಸ್.ಸುರೇಶ್, ಉಪಾಧ್ಯಕ್ಷೆ ಮಮತ ಬಾಲಸುಬ್ರಹ್ಮಣ್ಯ ಬುಧವಾರ ಅಧಿಕಾರ ಸ್ವೀಕರಿಸಿದರು.

ನಗರಸಭೆಯಲ್ಲಿ ಪೌರಾಯುಕ್ತ ರಾಮದಾಸ್ ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಸನ್ಮಾನಿಸಿ ನಗರಸಭೆಯಲ್ಲಿ ಒಳ್ಳೆಯ ಆಡಳಿತ ನಡೆಸಿ, ನಗರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು.

ನಂತರ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ರಾಮಸಮುದ್ರಕ್ಕೆ ತೆರಳಿ ಡಾ.ಬಿ.ಆ‌ರ್.ಅಂಬೇಡ್ಕರ್‌ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಗರಸಭೆಯ ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಎಸ್. ಸುರೇಶ್, ಉಪಾಧ್ಯಕ್ಷೆ ಮಮತ ಬಾಲಸುಬ್ರಹ್ಮಣ್ಯ ಅವರನ್ನು ನಗರಸಭಾ ಸದಸ್ಯರು, ಅಧಿಕಾರಿಗಳು, ಬಿಜೆಪಿ ಮುಖಂಡರು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ನಗರದ ಅಭಿವೃದ್ಧಿಗೆ ಒತ್ತು:

ನಗರಸಭೆ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಸ್. ಸುರೇಶ್ ಮಾತನಾಡಿ, ಸದಸ್ಯರು, ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ತಂದು ನಗರವನ್ನು ಪ್ರಗತಿಯತ್ತ ಕೊಂಡೊಯ್ಯಲಾಗುವುದು. ಉಪಾಧ್ಯಕ್ಷರು ತಾವು ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ನಗರದ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಗರದ ಸ್ವಚ್ಛತೆ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ನಗರಸಭಾ ಸದಸ್ಯರಾದ ಸಿ.ಎಂ.ಶಿವರಾಜ್, ಚಂದ್ರಶೇಖರ್, ಸುದರ್ಶನ್‌ಗೌಡ, ಮಂಜುನಾಥ್, ಮಾಜಿ ಅಧ್ಯಕ್ಷೆ ಸಿ.ಎಂ. ಆಶಾ ನಟರಾಜು, ಕುಮುದ ಕೇಶವಮೂರ್ತಿ, ಲೋಕೇಶ್ವರಿ ಚಿಕ್ಕರಾಜು, ಗಾಯಿತ್ರಿ ಚಂದ್ರಶೇಖರ್, ಮುಖಂಡರಾದ ನಟರಾಜು, ಕಪಿ ನಿನಾಯಕ, ಆ‌ರ್.ಪುಟ್ಟಮಲ್ಲಪ್ಪ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್, ಬಿಜೆಪಿ ಎಸ್‌.ಪಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಜಯಸುಂದರ್, ಜಿಲ್ಲಾಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ವಿರಾಟ್ ಶಿವು, ನಗರಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್, ನಗರಸಭಾ ಮಾಜಿ ಸದಸ್ಯ ಶ್ರೀಕಾಂತ್, ಕೂಸಣ್ಣ. ಮಣಿಕಂಠ, ಬಂಗಾರನಾಯಕ, ವೇಣುಗೋಪಾಲ್ ಇತರರು ಹಾಜರಿದ್ದರು.

Share this article