ಹಾವೇರಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೆಯುಐಡಿಎಫ್‌ಸಿ ಹಾಗೂ ನಗರಸಭೆ ಹಾವೇರಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿರುವ ವಿವಿಧ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟನೆಯನ್ನು ಜವಳಿ, ಕಬ್ಬು, ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ನೆರವೇರಿಸಿದರು.
ಹಾವೇರಿ: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೆಯುಐಡಿಎಫ್‌ಸಿ ಹಾಗೂ ನಗರಸಭೆ ಹಾವೇರಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿರುವ ವಿವಿಧ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟನೆಯನ್ನು ಜವಳಿ, ಕಬ್ಬು, ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ನೆರವೇರಿಸಿದರು. ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಾಣವಾದ ಈಜು ಕೋಳ ಹಾಗೂ ಬ್ಯಾಡ್ಮಿಂಟನ್ ಪೋರ್ಟ್ ಉದ್ಘಾಟಿಸಿದರು. ನಂತರ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ ಅಭಿಲೇಖಾಲಯದ ಹಳೆಯ ಕಂದಾಯ ದಾಖಲೆಗಳನ್ನು ಡಿಜಿಟಲಿಕರಣ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು.
ಬಳಿಕ ನಾಗೇಂದ್ರ ಮಟ್ಟಿಯಲ್ಲಿ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಹಂತ-04ರ ಯೋಜನೆಯಡಿಯಲ್ಲಿ ಹಮ್ಮಿಕೊಂಡಿರುವ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಹಾಗೆಯೇ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ ವಿವಿಧ ಬಸ್ಸುಗಳ ಹೊಸ ಸಂಚಾರ ಮಾರ್ಗಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ ಶ್ರೀಧರ, ಪೊಲೀಸ್ ಅಧೀಕ್ಷಕರಾದ ಅಂಶು ಕುಮಾರ, ಅಪರ ಜಿಲ್ಲಾಧಿಕಾರಿ ಡಾ. ಎಲ್.ನಾಗರಾಜ್, ಉಪ ವಿಭಾಗಾಧಿಕಾರಿ ಚನ್ನಪ್ಪ, ತಹಸೀಲ್ದಾರ್ ಶರಣಮ್ಮ ಹಾಗೂ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.