ನಾಡಿದ್ದು ಕೊಳ್ಳೇಗಾಲದಲ್ಲಿ ಶಿಕ್ಷಕರಿಗಾಗಿ ಉದ್ಯೋಗ ಮೇಳ

KannadaprabhaNewsNetwork |  
Published : Mar 06, 2025, 12:31 AM IST
5ಸಿಎಚ್‌ಎನ್‌54ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ರೂಪ್ಸ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. | Kannada Prabha

ಸಾರಾಂಶ

ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ರೂಪ್ಸ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ನಂಜುಂಡ ಸ್ವಾಮಿ ಮಾತನಾಡಿದರು.

ಚಾಮರಾಜನಗರ: ರೂಪ್ಸ ಜಿಲ್ಲಾ ಘಟಕದ ವತಿಯಿಂದ ಶಿಕ್ಷಕರಿಗಾಗಿ ವಿಶೇಷ ಉದ್ಯೋಗ ಮೇಳವನ್ನು ಮಾ.8 ರಂದು ಕೊಳ್ಳೇಗಾಲ ಪಟ್ಟಣದ ರೋಟರಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ ಎಂದು ರೂಪ್ಸ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ನಂಜುಂಡ ಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 119 ಖಾಸಗಿ ಶಾಲೆಗಳಿದ್ದು, ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಮಾ.8ರಂದು ಕೊಳ್ಳೇಗಾಲದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯಲಿದೆ ಎಂದರು. ಎಸ್ಸೆಸ್ಸೆಲ್ಸಿ, ಪಿಯುಸಿ, ಎನ್‌ಎಸ್‌ಟಿ, ಡಿಎಡ್, ಬಿಎಡ್ ಸೇರಿದಂತೆ ಇತರೆ ಪದವಿ ಪಡೆದಿರುವವರು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಆಸಕ್ತ ಶಿಕ್ಷಕರು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ರೂಪ್ಸ ಕರ್ನಾಟಕದಲ್ಲಿನ ಅನುದಾನ ರಹಿತ ಖಾಸಗಿ ಶಾಲೆಗಳ ಹಿತಾಸಕ್ತಿ ಕಾಪಾಡಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕಾರ್ಯನಿರ್ವಹಿಸುವ ಪ್ರಮುಖ ಸಂಸ್ಥೆಯಾಗಿದ್ದು, ಸಂಘವು ಶಿಕ್ಷಕರ ಉದ್ಯೋಗಾವಕಾಶವನ್ನು ವೃದ್ಧಿಸುವುದು ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು. ಉದ್ಯೋಗ ಮೇಳವು ಶಿಕ್ಷಕರಿಗೆ ಒಂದು ಉತ್ತಮ ಅವಕಾಶವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 7337641744, 9035822341 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ರಮೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಉಮೇಶ್ ಚಂದ್ರ, ಕೊಳ್ಳೇಗಾಲ ರೋಟರಿ ಕ್ಲಬ್ ಅಧ್ಯಕ್ಷೆ ಸರಸ್ವತಿ ಹೊನ್ನಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ