ಕನ್ನಡಪ್ರಭ ವಾರ್ತೆ ತುಮಕೂರು
ಯೂಶನಿವಾರ ಬೆಳಿಗ್ಗೆ 6 ಗಂಟೆಯಿಂದಲೇ ಎಲ್ಲ ಸರ್ಕಾರಿ ಮತ್ತು ಖಾಸಗಿ ಕ್ಲಿನಿಕ್‌ಗಳು ಓಪಿಡಿ ಬಂದ್ ಮಾಡಿ ಘಟನೆಗೆ ಆಕ್ರೋಶ ವ್ಯಕ್ತಪಡಿಸಲಾಯಿತು. ನಗರದ ಸೇರಿದಂತೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಆಗಿರುವುದರಿಂದ ಚಿಕಿತ್ಸೆ ಪಡೆಯಲು ಬಂದಿದ್ದ ರೋಗಿಗಳು ಪರದಾಡುವಂತಾಯಿತು. ಹಳ್ಳಿಗಳಿಂದ ಬಂದಿದ್ದ ರೋಗಿಗಳು ವೈದ್ಯರು ಇಲ್ಲದನ್ನು ನೋಡಿ ವಾಪಸ್ ಹೋದರು.
ಈ ಕುರಿತಂತೆ ಪತ್ರಿಕೆಯೊಂದಿಗೆ ಮಾತನಾಡಿದ ಐಎಂಎ ಜಿಲ್ಲಾಧ್ಯಕ್ಷ ಡಾ.ಎಚ್.ವಿ.ರಂಗಸ್ವಾಮಿ, ವೈದ್ಯಕೀಯ ಸಂಸ್ಥೆಗಳು ಮತ್ತು ವೈದ್ಯಕೀಯ ಸಿಬ್ಬಂದಿ ಅತಿ ಸೂಕ್ಷ್ಮ ಪರಿಸ್ಥಿತಿಯಲ್ಲಿ ಆತಂಕದಿಂದ ತಮ್ಮ ಸೇವಾಕ್ಷೇತ್ರದಲ್ಲಿ ಅಭದ್ರತೆಯೊಂದಿಗೆ ಕರ್ತವ್ಯ ನಿರ್ವಹಿಸುವ ಸನ್ನಿವೇಶಗಳನ್ನು ಸೃಷ್ಟಿಸಲಾಗುತ್ತಿದೆ. ಆದ್ದರಿಂದ ಮಾನವೀಯ ಕಾಳಜಿಯ ಸೇವಾಕ್ಷೇತ್ರವನ್ನು ಕಲುಷಿತಗೊಳಿಸುವ ಈ ಪ್ರಯತ್ನಗಳನ್ನು ಮೊಳೆಕೆಯಲ್ಲೇ ನಿಷ್ಕ್ರಿಯಗೊಳಿಸದಿದ್ದಲ್ಲಿ ಮುಂದೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಸಿದ್ಧಗಂಗಾ ಆಸ್ಪತ್ರೆ ಓಪಿಡಿ ಬಂದ್ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವುದ್ಯಾಮೇಲಿನ ಅತಿ ಕ್ರೂರ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಒಂದು ದಿನದ ಆರೋಗ್ಯ ಸೇವೆಗಳ ಬಂದ್ ಗೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನ ಸಂಸ್ಥೆ (ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಆಸ್ಪತ್ರೆ ಮತ್ತು ಸಿದ್ಧಗಂಗಾ ಆಸ್ಪತ್ರೆ ) ಬೆಂಬಲ ವ್ಯಕ್ತಪಡಿಸಿದೆ.
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ಸಾತ್ನಕೋತ್ತರ ವಿದ್ಯಾರ್ಥಿನಿಯ ಅಮಾನುಷ ಹತ್ಯೆ ಖಂಡಿಸಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತುರ್ತು ಅಗತ್ಯ ಸೇವೆ ಹೊರತಾಗಿ ಎಲ್ಲಾ ಹೊರ ರೋಗಿ ತಪಾಸಣಾ ಸೇವೆಯನ್ನು ಬಂದ್ ಮಾಡಲಾಗಿತ್ತು. ಈ ಕುರಿತಂತೆ ಪತ್ರಿಕೆಗೆ ಮಾಹಿತಿ ನೀಡಿದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ.ರಮಣ್.ಎಂ ಹುಲಿನಾಯ್ಕರ್ ಹಾಗೂ ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಈ ಘಟನೆ ಖಂಡನೀಯ. ಈ ಘಟನೆಯ ಬಗ್ಗೆ ಭಾರತೀಯ ವೈದ್ಯಕೀಯ ಸಂಘ ತೆಗೆದುಕೊಳ್ಳುವ ನಿರ್ಣಾಯಗಳಲ್ಲಿ ನಮ್ಮ ಸಹಮತವಿರುತ್ತದೆ. ಈ ಘಟನೆಯನ್ನು ಖಂಡಿಸುವುದಕ್ಕಾಗಿ ಆ.19 ರಂದು ಸೋಮವಾರ ಸಂಜೆ 6.30 ಕ್ಕೆ ಮೇಣದ ಬತ್ತಿ ಮೂಲಕ ಮೃತ ವೈದ್ಯ ವಿದ್ಯಾರ್ಥಿಗೆ ಶಾಂತಿ ಕೋರಲಾಗುವುದು ಎಂದು ತಿಳಿಸಿದರು.