ಡಾ. ಗೀತಾ ವಸಂತ ಕೃತಿಗೆ ಇನಾಂದಾರ್ ಪ್ರಶಸ್ತಿ

KannadaprabhaNewsNetwork |  
Published : Apr 06, 2026, 03:00 AM IST
3ಗೀತಾ | Kannada Prabha

ಸಾರಾಂಶ

ಖ್ಯಾತ ವಿಮರ್ಶಕ ಪ್ರೊ. ವಿ.ಎಂ. ಇನಾಂದಾರ್ ನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ-2025’ಗೆ ಪ್ರಸಿದ್ಧ ಲೇಖಕಿ, ವಿಮರ್ಶಕಿ ಡಾ. ಗೀತಾ ವಸಂತ ಅವರ ‘ತೆರೆದಷ್ಟೂ ಅರಿವು’ ವಿಮರ್ಶಾ ಕೃತಿ ಆಯ್ಕೆಯಾಗಿದೆ.

ಉಡುಪಿ: ಖ್ಯಾತ ವಿಮರ್ಶಕ ಪ್ರೊ. ವಿ.ಎಂ. ಇನಾಂದಾರ್ ನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ-2025’ಗೆ ಪ್ರಸಿದ್ಧ ಲೇಖಕಿ, ವಿಮರ್ಶಕಿ ಡಾ. ಗೀತಾ ವಸಂತ ಅವರ ‘ತೆರೆದಷ್ಟೂ ಅರಿವು’ ವಿಮರ್ಶಾ ಕೃತಿ ಆಯ್ಕೆಯಾಗಿದೆ.

ಪ್ರಶಸ್ತಿಯನ್ನು ಏ. 15ರಂದು ಇಲ್ಲಿನ ಎಂ.ಜಿ.ಎಂ ಕಾಲೇಜಿನ ವಾರ್ಷಿಕ ಮುದ್ದಣ ಸಾಹಿತ್ಯೋತ್ಸವದಲ್ಲಿ ನೀಡಿ ಗೌರವಿಸಲಾಗುತ್ತದೆ.

ತುಮಕೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಗೀತಾ ವಸಂತ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕಾಟೀಮನೆಯವರು. ‘ಸ್ವಾತಂತ್ರ್ಯೋತ್ತರ ಕನ್ನಡ ಮಹಿಳಾ ಕಥನ ಸಾಹಿತ್ಯದಲ್ಲಿ ಸ್ತ್ರೀವಾದಿ ಚಿಂತನೆಗಳು’ ಎಂಬ ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಹಾಗೂ ‘ಬೇಂದ್ರೆ ಕಾವ್ಯದ ವಿರಾಟ್ ಸ್ವರೂಪ ‘ಪ್ರಬಂಧಕ್ಕೆ ಡಿ ಲಿಟ್ ಪದವಿ ಪಡೆದಿದ್ದಾರೆ. ಕಾವ್ಯ, ಸಣ್ಣಕಥೆ, ವಿಮರ್ಶೆ, ಮಹಿಳಾ ಅಧ್ಯಯನ, ಸಂಸ್ಕೃತಿ ಅಧ್ಯಯನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ‘ಹೊಸಿಲಾಚೆ ಹೊಸಹೆಜ್ಜೆ’ ಮೊದಲ ಕವನ ಸಂಕಲನ. ‘ಚೌಕಟ್ಟಿನಾಚೆಯವರು’ ಕಥಾ ಸಂಕಲನ, ‘ಬೆಳಕಿನ ಬೀಜ’, ‘ಹೊಸ ದಿಗಂತ ಹೊಸದಾರಿ’, ‘ಬೀಜದೊಳಗಣ ವೃಕ್ಷ’, ‘ಅಕ್ಷರ ದಾಹ’, ‘ತೆರೆದಷ್ಟೂ ಅರಿವು’ ಮುಂತಾದುವು ಅವರ ವಿಮರ್ಶಾ ಕೃತಿಗಳು. ಬೇಂದ್ರೆ ಕಾವ್ಯದ ಅವಧೂತ ಪ್ರಜ್ಞೆ, ತುಮಕೂರು ಜಿಲ್ಲೆಯ ಮಹಿಳಾ ಲೇಖಲೋಕ, ಕರ್ನಾಟಕದ ಸಂಸ್ಕೃತಿ ಹಾಗೂ ಸಾಹಿತ್ಯದ ಮೇಲೆ ಅವಧೂತ ಪರಂಪರೆಗಳ ಪ್ರಭಾವ ಇವು ಅವರ ಸಂಶೋಧನೆಗಳು. ‘ಅವಳ ಅರಿವು’, ‘ಕನ್ನಡಕ್ಕೊಬ್ಬರೇ ಗೋಕಾಕರು’, ‘ಕಂಡವರಿಗಷ್ಟೆ’, ‘ಆಧುನಿಕ ಕನ್ನಡ ಸಾಹಿತ್ಯದಲ್ಲಿ ಅಲಕ್ಷಿತ ಲೋಕದ ಸಂಕಥನ’ ಇವು ಸಂಪಾದಿತ ಕೃತಿಗಳು.

ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯಪ್ರಶಸ್ತಿ, ಬೇಂದ್ರೆ ಸಾಹಿತ್ಯ ಪ್ರಶಸ್ತಿ, ಡಾ. ಪಾಟೀಲ ಪುಟ್ಟಪ್ಪ ಕಥಾ ಪ್ರಶಸ್ತಿ, ದೇವಾಂಗನಾ ಶಾಸ್ತ್ರಿ ಸಾಹಿತ್ಯ ಪುರಸ್ಕಾರ, ಬ್ಯಾಡಗಿ ಸಂಕಮ್ಮ ಕಾವ್ಯ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಲಭಿಸಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡತನ ನೀಗಿದ್ದರೆ ಪ್ರಚಾರಕ್ಕೆ 5 ದಿನ ಬರಬೇಕಿತ್ತಾ?: ಕುಮಾರಸ್ವಾಮಿ
ಕಾರಜೋಳ-ಚರಂತಿಮಠ ಜೋಡಿ ಬಾಗಲಕೋಟೆ ಅಭಿವೃದ್ಧಿಗೆ ಮಾರಕ: ತಿಮ್ಮಾಪೂರ