ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿದ್ಯಾವಿಕಾಸಎಂಜಿನಿಯರಿಂಗ್ ಕಾಲೇಜು ವತಿಯಿಂದ ವಿದ್ಯಾವಿಕಾಸ ಎಂಜಿನಿಯರಿoಗ್ ಕಾಲೇಜಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರದ ಭವಿಷ್ಯವಾಗಿರುವ ಯುವಜನರು ಶಾಲಾ- ಕಾಲೇಜು ಹಂತದಲ್ಲಿಯೇ ಮಧ್ಯಪಾನ ಧೂಮಪಾನ ಹಾಗೂ ಡ್ರಗ್ಸ್ ಗಳಂತಹ ಹಾನಿಕಾರಕ ವಸ್ತುಗಳಿಗೆ ಮಾರಿಹೋಗುತ್ತಿದ್ದಾರೆ. ಭವಿಷ್ಯ ಕಟ್ಟಿಕೊಳ್ಳುವ ಅವಕಾಶವಿರುವುದು ವಿದ್ಯಾರ್ಥಿ ಜೀವನದಲ್ಲಿಯೇ. ಹಾಗಾಗಿ ಈ ಉತ್ತಮ ಸಮಯವನ್ನು ಒಳ್ಳೆಯ ಕಾರ್ಯ ಚಟುವಟಿಕೆಗೆ ಬಳಸಿಕೊಂಡು ಮತ್ತೊಬ್ಬರಿಗೆ ಮಾದರಿ ಆಗುವಂತೆ ಬದುಕಬೇಕು ಎಂದು ಅವರು ಸಲಹೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿ. ಕವೀಶ್ ಗೌಡ ಮಾತನಾಡಿ, ನಮಗೆಲ್ಲರಿಗೂ ಹಲವಾರು ಜವಾಬ್ದಾರಿಗಳಿದ್ದು, ಮದ್ಯಪಾನ ಧೂಮಪಾನದಂತಹ ಅಪಾಯಕಾರಿ ವಸ್ತುಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದ ಮೇಲೆ ಅದನ್ನು ಹತ್ತಿರಕ್ಕೆ ಬರಲು ಬಿಡಬಾರದು ಎಂದರು.
ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಮಾತನಾಡಿ, ಅಲ್ಪಕಾಲಿಕ ಸಂತೋಷಕ್ಕಾಗಿ ಬಳಸುವ ಮಾದಕ ವ್ಯಸನ ವಸ್ತುಗಳು ಆರೋಗ್ಯಕ್ಕೆ ಹಾನಿಕಾರಕ. ಅವು ನಮ್ಮನ್ನು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರನ್ನಾಗಿ ಮಾಡುತ್ತವೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಸಿಗರೇಟ್ ಅಭ್ಯಾಸ ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಈಗಲೇ ಇಂತಹ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾದರೆ ಮುಂದಿನ ದಿನಗಳಲ್ಲಿ ಅವರ ಜೀವನ ತುಂಬಾ ಕಷ್ಟವಾಗುತ್ತದೆ. ಇದರಿಂದ ಹೊರ ಬಂದು ವಿದ್ಯಾರ್ಥಿಗಳು ಆದಷ್ಟು ಎನ್.ಎಸ್.ಎಸ್, ಎನ್.ಸಿ.ಸಿ ಅಂತಹ ಉತ್ತಮ ಚಟವಟಿಕೆ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಡಿ. ಅಶೋಕ್ ಕುಮಾರ್ ಮಾತನಾಡಿ, ವ್ಯಸನ ಮುಕ್ತಕ್ಕೆ ಸಂಬoಧಿಸಿದoತೆ ಪ್ರತಿಜ್ಞಾವಿಧಿ ಬೋಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್ ಸ್ವಾಗತಿಸಿದರು.