19 ರಂದು ಬಿರೇಶ್ವರ ಸಹಕಾರಿಯ ನೂತನ ಮುಖ್ಯ ಕಚೇರಿ ಉದ್ಘಾಟನೆ

KannadaprabhaNewsNetwork |  
Published : Sep 17, 2026, 03:00 AM IST
ಚಿಕ್ಕೋಡಿ | Kannada Prabha

ಸಾರಾಂಶ

ತಾಲೂಕಿನ ಯಕ್ಸಂಬಾದ ಶ್ರೀ ಬಿರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಮುಖ್ಯ ಆಡಳಿತ ಕಚೇರಿ ಸೆ.19 ರಂದು ಮಧ್ಯಾಹ್ನ 1 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಹಾಗೂ ಎನ್‌ಸಿಯುಐ ನಿರ್ದೇಶಕ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ತಾಲೂಕಿನ ಯಕ್ಸಂಬಾದ ಶ್ರೀ ಬಿರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಮುಖ್ಯ ಆಡಳಿತ ಕಚೇರಿ ಸೆ.19 ರಂದು ಮಧ್ಯಾಹ್ನ 1 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಹಾಗೂ ಎನ್‌ಸಿಯುಐ ನಿರ್ದೇಶಕ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಚೇರಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಹಕಾರ ರಾಜ್ಯ ಸಚಿವ ಮುರಳೀಧರರಾವ್ ಮೋಹೋಳ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಿ.ನಾರಾಯಣಸ್ವಾಮಿ ಹಾಗೂ ಜಗದೀಶ ಶೆಟ್ಟರ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಳೆದ ವರ್ಷ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಕಚೇರಿ ಉದ್ಘಾಟನೆಗೆ ಯೋಜಿಸಲಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿತ್ತು. ಇದೀಗ ಸೆ.19ರಂದು ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ ಎಂದು ತಿಳಿಸಿದ್ದಾರೆ.ಆಧುನಿಕ ಸಹಕಾರಿ ವ್ಯವಸ್ಥೆಯ ಕೇಂದ್ರ:

ವಿಶಾಲ ಪ್ರದೇಶದಲ್ಲಿ ನಿರ್ಮಿಸಿರುವ ನೂತನ ಮುಖ್ಯ ಕಚೇರಿಯಲ್ಲಿ ಆಡಳಿತ ಕಚೇರಿ, ಸಮುದಾಯ ಭವನ, ಸಿಬ್ಬಂದಿ ವಸತಿ, ಸೌರ ವಿದ್ಯುತ್ ವ್ಯವಸ್ಥೆ, ಉದ್ಯಾನ ಹಾಗೂ ವಾಹನ ನಿಲುಗಡೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 80,800 ಚದರ ಅಡಿ ವಿಸ್ತೀರ್ಣದ ಮುಖ್ಯ ಕಟ್ಟಡದಲ್ಲಿ ಸುಮಾರು 250 ಸಿಬ್ಬಂದಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಮುಖ್ಯ ಕಚೇರಿ ಆವರಣದಲ್ಲಿ 1,500 ಜನರ ಆಸನ ಸಾಮರ್ಥ್ಯದ ಹವಾನಿಯಂತ್ರಿತ ಶ್ರೀ ಬಿರೇಶ್ವರ ಭವನ ನಿರ್ಮಿಸಲಾಗಿದೆ. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಂಸ್ಥೆಯ ಕಾರ್ಯಕ್ರಮಗಳನ್ನು ಇಲ್ಲಿ ಆಯೋಜಿಸಬಹುದಾಗಿದೆ. ಸಿಬ್ಬಂದಿ ಹಾಗೂ ಕುಟುಂಬಗಳಿಗಾಗಿ ಮೂರು ವಸತಿ ಕಟ್ಟಡಗಳಲ್ಲಿ ಒಟ್ಟು 69 ವಸತಿ ಘಟಕಗಳನ್ನು ನಿರ್ಮಿಸಲಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಸಂಸ್ಥೆಯ ಬೆಳವಣಿಗೆಯ ಪಯಣಕ್ಕೆ ನೂತನ ಮುಖ್ಯ ಕಚೇರಿ ಪ್ರಮುಖ ಮೈಲಿಗಲ್ಲಾಗಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.ಸಂಸ್ಥೆಯು 4.60 ಲಕ್ಷ ಸದಸ್ಯರನ್ನು ಹೊಂದಿದ್ದು, ₹5,667 ಕೋಟಿ ಠೇವಣಿ ಹಾಗೂ ₹4,038 ಕೋಟಿ ಸಾಲ ವಿತರಿಸಿದೆ. ₹51.04 ಕೋಟಿ ನಿವ್ವಳ ಲಾಭ ಗಳಿಸಿದ್ದು, ₹9,700 ಕೋಟಿ ಒಟ್ಟು ವ್ಯವಹಾರ ನಡೆಸಿದೆ.

-ಅಣ್ಣಾಸಾಹೇಬ ಜೊಲ್ಲೆ,

ಸಂಸ್ಥೆಯ ಸಂಸ್ಥಾಪಕ ಹಾಗೂ ಎನ್‌ಸಿಯುಐ ನಿರ್ದೇಶಕರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟ್ಯಂತರ ಅನುದಾನ: ಆಮೆಗತಿ ಕಾಮಗಾರಿ!
ಹಿಂದೂ ಸಮಾಜ ಒಗ್ಗಟ್ಟಾಗಿ ತನ್ನ ಶಕ್ತಿ ಪ್ರದರ್ಶಿಸಬೇಕಿದೆ: ಯತ್ನಾಳ