₹86.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ

KannadaprabhaNewsNetwork |  
Published : Feb 03, 2026, 01:15 AM IST
ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಕೆರೆ ಕಟ್ಟೆ, ಅಂಗನವಾಡಿ, ಶಾಲೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಪಡಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಕಾಣಲು ಸಾಧ್ಯ.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೆಂ.ಗ್ರಾ

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಆಶಯದಂತೆ ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಜಿಲ್ಲೆಯ ಆವತಿ ಹಾಗೂ ವೆಂಕಟಗಿರಿ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಕೆರೆ ಕಟ್ಟೆ, ಅಂಗನವಾಡಿ, ಶಾಲೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಪಡಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಕಾಣಲು ಸಾಧ್ಯ ಎಂದರು. ಅಧಿಕಾರಿಗಳು, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಸರ್ಕಾರ ನೀಡುವ ಅನುದಾನದ ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಅಭಿವೃದ್ಧಿ ಮಾಡಬೇಕು ಎಂದು ಸಲಹೆ ನೀಡಿದರು.

ಆವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವತಿ ಗ್ರಾಮದಲ್ಲಿ ₹22 ಲಕ್ಷ ವೆಚ್ಚದ ಘನತ್ಯಾಜ್ಯ ವಿಲೇವಾರಿ ಘಟಕ, ₹15 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರ, ₹5 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ, ಆವತಿ ಗ್ರಾಮದ ವಿವಿಧ ಭಾಗಗಳಲ್ಲಿ ₹7.5 ಲಕ್ಷ ವೆಚ್ಚದ ಮುಖ್ಯದ್ವಾರಗಳ ಕಮಾನು ನಾಮಫಲಕ ಅಳವಡಿಕೆ, ಜನತಾ ಕಾಲೋನಿ ಗ್ರಾಮದಲ್ಲಿ ₹15 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರ ಹಾಗೂ ₹5 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ, ಅತ್ತಿಬೆಲೆ ಗ್ರಾಮದಲ್ಲಿ ₹4 ಲಕ್ಷ ವೆಚ್ಚದ ಹೈಮಾಸ್ಟ್ ಲೈಟ್ ಹಾಗೂ ವೆಂಕಟಗಿರಿ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗವಾರ ಗ್ರಾಮದಲ್ಲಿ ₹13 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರ ಸೇರಿದಂತೆ ಒಟ್ಟು ₹86.5 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಬಮುಲ್ ನಿರ್ದೇಶಕ ಎಸ್ ಪಿ ಮುನಿರಾಜು, ಮುಖಂಡರಾದ ಮಂಜುನಾಥ್, ವೆಂಕಟೇಶ್, ಪ್ರಸನ್ನ ಕುಮಾರ್, ತಹಸೀಲ್ದಾರ್ ಅನಿಲ್, ಶ್ರೀನಾಥ್ ಗೌಡ ಸೇರಿದಂತೆ ಪಂಚಾಯಿತಿ ಅಧ್ಯಕ್ಷರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

------

ಫೋಟೋ-

2ಕೆಡಿಬಿಪಿ2- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

25 ವರ್ಷದಲ್ಲಿ ರೈತರಿಗೆ 111 ಲಕ್ಷ ಕೋಟಿ ನಷ್ಟ: ಶರ್ಮಾ
ಆಟೋ ಗ್ಲಾಸ್ ಒಡೆದಿದ್ದಕ್ಕೆಸ್ನೇಹಿತನ ಕೊಂದ ಚಾಲಕ