ಮಲೆನಾಡು ಕಾಲೇಜಿನಲ್ಲಿ ಡಿಜಿಟಲ್ ಲ್ಯಾಬ್ ಉದ್ಘಾಟನೆ

KannadaprabhaNewsNetwork |  
Published : Jun 14, 2026, 01:45 AM IST
13ಎಚ್ಎಸ್ಎನ್16 :  | Kannada Prabha

ಸಾರಾಂಶ

ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿನ ಎಂಇ- ಆರ್‌ಐಐಎಸ್‌ಇ ಫೌಂಡೇಶನ್, ಕಳೆದ ಕೆಲ ವರ್ಷಗಳಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು, ಗ್ರಾಮೀಣ ಮಹಿಳೆಯರು ಹಾಗೂ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ, ಡಿಜಿಟಲ್ ಸಾಕ್ಷರತೆ ಮತ್ತು ಸಮುದಾಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಹೊಸದಾಗಿ ಆರಂಭಗೊಂಡಿರುವ ಡಿಜಿಟಲ್ ಲ್ಯಾಬ್, ಡಿಜಿಟಲ್ ಸಾಕ್ಷರತೆ, ಸ್ಟೆಮ್‌ ಶಿಕ್ಷಣ ಹಾಗೂ ತಂತ್ರಜ್ಞಾನ ಆಧಾರಿತ ಕೌಶಲ್ಯ ತರಬೇತಿಯನ್ನು ವಿಸ್ತರಿಸಲು ನೆರವಾಗಲಿದೆ. ಗ್ರಾಮೀಣ ಮತ್ತು ಹಿಂದುಳಿದ ಭಾಗಗಳ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರೋಗ್ರೆಸ್ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್‌ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯಿಂದ ಸ್ಥಾಪಿಸಲಾದ ಡಿಜಿಟಲ್ ಲ್ಯಾಬ್ ಅನ್ನು ಪ್ರೋಗ್ರೆಸ್ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಟ್‌ನ ಗಿರಿಜಾ ಕೋಳಗಡ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಅಧ್ಯಕ್ಷ ಬಿ.ಆರ್. ಗುರುದೇವ್, ಕಾರ್ಯದರ್ಶಿ ಜಿ.ಟಿ. ಕುಮಾರ್, ಮಾಜಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್. ಪ್ರದೀಪ್, ಎಂಇ ರೈಸ್ ಫೌಂಡೇಶನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗೀತಾ ಕಿರಣ್ ಎ. ಹಾಗೂ ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ನಿರ್ದೇಶಕರು ಉಪಸ್ಥಿತರಿದ್ದರು.ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿನ ಎಂಇ- ಆರ್‌ಐಐಎಸ್‌ಇ ಫೌಂಡೇಶನ್, ಕಳೆದ ಕೆಲ ವರ್ಷಗಳಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು, ಗ್ರಾಮೀಣ ಮಹಿಳೆಯರು ಹಾಗೂ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ, ಡಿಜಿಟಲ್ ಸಾಕ್ಷರತೆ ಮತ್ತು ಸಮುದಾಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಹೊಸದಾಗಿ ಆರಂಭಗೊಂಡಿರುವ ಡಿಜಿಟಲ್ ಲ್ಯಾಬ್, ಡಿಜಿಟಲ್ ಸಾಕ್ಷರತೆ, ಸ್ಟೆಮ್‌ ಶಿಕ್ಷಣ ಹಾಗೂ ತಂತ್ರಜ್ಞಾನ ಆಧಾರಿತ ಕೌಶಲ್ಯ ತರಬೇತಿಯನ್ನು ವಿಸ್ತರಿಸಲು ನೆರವಾಗಲಿದೆ. ಗ್ರಾಮೀಣ ಮತ್ತು ಹಿಂದುಳಿದ ಭಾಗಗಳ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತಪಟ್ಟಿ ಪರಿಷ್ಕರಣೆಗೆ ಸಹಕರಿಸಿ: ಡಾ.ಸಿದ್ದರಾಮಯ್ಯ
ಕ್ಷೇತ್ರದ ಅಭಿವೃದ್ಧಿಯೇ ನನ್ನ ಉದ್ದೇಶ ಎಂದ ಶಾಸಕ ಸಿಮೆಂಟ್ ಮಂಜು