ಕನ್ನಡಪ್ರಭ ವಾರ್ತೆ ಮದ್ದೂರು
ನಗರದಲ್ಲಿ ಗುರುವಾರ ಆಯೋಜಿಸಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕು ಡೊಂಡುಗಳನ್ನು ತಿದ್ದಿದ ಮಹಾನ್ ಮಾನವತಾವಾದಿ ಬಸವಣ್ಣರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು, ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೇವೂರು ಶ್ರೀಮಲ್ಲಿಕಾರ್ಜುನಸ್ವಾಮಿ ಮಠದ ಶ್ರೀಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ, ಬೇಬಿಮಠದ ಶ್ರೀರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶ್ರೀಶಿವಬಸವ ಸ್ವಾಮೀಜಿಗಳ ಸಾನಿಧ್ಯದಲ್ಲಿ ಶಾಸಕ ಕೆ.ಎಂ.ಉದಯ್ ಜಯಂತ್ಯುತ್ಸವ ಉದ್ಘಾಟಿಸುವರು ಜಾಗತಿಕ ಲಿಂಗಾಯತ ಮಹಾಸಭಾ (ಜೆಎಲ್ಬಿ) ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಅಧ್ಯಕ್ಷತೆ ವಹಿಸುವರು ಎಂದರು.ಬಸವಣ್ಣನವರ ಭಾವಚಿತ್ರಕ್ಕೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಪುಷ್ಪಾರ್ಚನೆ ಮಾಡುವವರು. ಬಸವ ನುಡಿಯನ್ನು ಶರಣು ವಿಶ್ವವಚನ ಫೌಂಡೇಷನ್ ಅಧ್ಯಕ್ಷ ವಚನಕುಮಾರಸ್ವಾಮಿ ಆಡುವರು. ಅತಿಥಿಗಳಾಗಿ ಆರಕ್ಷಕ ನಿರೀಕ್ಷಕ ಎಚ್.ಎಸ್.ನವೀನ್, ಶರಣ ಸಾಹಿತ್ಯ ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷ ಎಂ.ಸುಬ್ರಹ್ಮಣ್ಯ, ಶರಣೆ ಅಕ್ಕ ಮಹಾದೇವಿ ಪ್ರಶಸ್ತಿ ಪ್ರಧಾನವನ್ನು ಶರಣು ವಿಶ್ವವಚನ ಫೌಂಡೇಷನ್ ಶರಣೆ ರೂಪ ಕುಮಾರಸ್ವಾಮಿ ಮಾಡಲಿದಾರೆ ಎಂದರು.