ಮಡಿಕೇರಿ ಬ್ಲಾಸಂ ಶಾಲೆಯಲ್ಲಿ ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆ ಉದ್ಘಾಟನೆ

KannadaprabhaNewsNetwork |  
Published : Feb 03, 2024, 01:45 AM IST
ಚಿತ್ರ : ಗೌರಮ್ಮ | Kannada Prabha

ಸಾರಾಂಶ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯ ಬ್ಲಾಸಮ್ ಶಾಲೆಯಲ್ಲಿ ಏರ್ಪಡಿಸಿದ್ದ ಗೌರಮ್ಮ ದತ್ತಿ ನಿಧಿ ಕಥಾಸ್ಪರ್ಧೆ ಉದ್ಘಾಟಿಸಿ ಭಾಗವಹಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್‌ ಸಾಹಿತ್ಯ ರಚನೆ ಮಾಹಿತಿ ನೀಡಿದರು.40ಕ್ಕೂ ಹೆಚ್ಚು ಶಾಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿದ್ಯಾರ್ಥಿಗಳು ಕಥೆ ರಚನೆಯ ಸಂದರ್ಭದಲ್ಲಿ ತಾವು ಪ್ರಸ್ತುತಪಡಿಸುವ ವಿಚಾರದ ಬಗ್ಗೆ ಪೂರ್ಣ ಅರಿವನ್ನು ಹೊಂದಿದ್ದು ಸರಳ ಭಾಷೆಯಲ್ಲಿ ಎಲ್ಲರ ಮನಸಿಗೆ ಮುಟ್ಟುವಂತೆ ಕಥೆ ಬರೆದರೆ ಅದು ಉತ್ಕೃಷ್ಟ ಸಾಹಿತ್ಯವಾಗುತ್ತದೆ. ಕಥೆಯ ಸಾರವು ಲೋಕಕ್ಕೆ ಉತ್ತಮ ಸಂದೇಶ ನೀಡುವಂತಿರಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯ ಬ್ಲಾಸಮ್ ಶಾಲೆಯಲ್ಲಿ ಏರ್ಪಡಿಸಿದ್ದ ಗೌರಮ್ಮ ದತ್ತಿ ನಿಧಿ ಕಥಾಸ್ಪರ್ಧೆ ಉದ್ಘಾಟಿಸಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಓದಿನೊಂದಿಗೆ ಕಥೆ ಕಾದಂಬರಿ ಸಾಹಿತ್ಯ ಓದುವುದರ ಮೂಲಕ ವಿದ್ಯಾರ್ಥಿಗಳು ತಮ್ಮ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದರು.ಬ್ಲಾಸಂ ಶಾಲೆಯ ಮುಖ್ಯೋಪಾಧ್ಯಾಯನಿ ಅನಸೂಯಾ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ವಿದ್ಯಾರ್ಥಿಗಳಿಗೆ ಈ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಒಲವು ಮೂಡುವ ಮೂಡಿಸುವ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಪುಸ್ತಕಗಳ ಓದಿನೊಂದಿಗೆ ಸಾಹಿತ್ಯಿಕ ಓದಿನ ಅವಶ್ಯಕತೆ ಇದೆ. ಅದನ್ನು ರೂಡಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹಮದ್, ರೇವತಿ ರಮೇಶ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಕಾರ್ಯದರ್ಶಿ ಕೆ.ಯು. ರಂಜಿತ್ ಇದ್ದರು ಜಿಲ್ಲೆಯ 40ಕ್ಕೂ ಹೆಚ್ಚು ಶಾಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ವಿವಿಧ ಶಾಲೆಗಳ ಆಧ್ಯಾಪಕರು ಉಪಸ್ಥಿತರಿದ್ದರು‌.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ