ಕನ್ನಡಪ್ರಭ ವಾರ್ತೆ ಮಂಗಳೂರು
ಇಸ್ಕಾನ್ ಸಂಸ್ಥೆಯ ಅಧ್ಯಕ್ಷ ಗುಣಾಕರ ರಾಮ ದಾಸ ಅಧ್ಯಕ್ಷ ಭಾಷಣದಲ್ಲಿ, ಅಕ್ಷಯ ಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಸುಮಾರು ೧.೦೦ ಕೋಟಿ ರು. ಮೌಲ್ಯದ ದಿನಂಪ್ರತಿ ೫೦,೦೦೦ ಲೀಟರ್ ಸಾಮರ್ಥ್ಯವುಳ್ಳ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕವನ್ನು (ಹಸಿರು ಸಂಕಲ್ಪ) ನೂತನವಾಗಿ ಆರಂಭಿಸಲಾಗಿದೆ. ಅದರ ಶುದ್ಧೀಕರಿಸಿದ ನೀರನ್ನು ಹಸಿರು ಕ್ರಾಂತಿಯ ಅಭಿಯಾನವಾಗಿ ಗಿಡಮರಗಳಿಗೆ ಸರಬರಾಜು ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಕೌಶಲ್ಯ ಅಭಿಯಾನದ ಅಂಗವಾಗಿ ಇಸ್ಕಾನ್ ಸಂಸ್ಥೆಯ ಗೋವರ್ಧನ ಗಿರಿ ನೂತನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕೇಂದ್ರಕ್ಕೆ ಕಟ್ಟಡಕ್ಕೆ (ಸಮರ್ಪಣ್) ಇಟ್ಟಿಗೆಗಳನ್ನು ಪೂಜಿಸಿ ಸಮರ್ಪಿಸಲಾಯಿತು. ಈ ಕಾರ್ಯಕ್ರಮದ ಸವಿನೆನಪಿಗಾಗಿ ಹಾಗೂ ಸಂಸ್ಥೆಯ ಸಮಾಜ ಸೇವಾ ಅಂಗವಾಗಿ ಅಡ್ಡೂರು ದ.ಕ. ಜಿಲ್ಲಾ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ, ಆಭರಣ ಜ್ಯುವೆಲ್ಲರ್ಸ್ ಆಡಳಿತ ನಿರ್ದೇಶಕ ಪ್ರತಾಪ್ ಮಧುಕರ್ ಕಾಮತ್, ಚಿತ್ತಾರ ಗೇರುಬೀಜ ಸಂಸ್ಥೆಯ ಆಡಳಿತ ನಿರ್ದೇಶಕ ಗೋಪಿನಾಥ ಕಾಮತ್, ಅದಾನಿ ಸಮೂಹ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಎಂ.ಆರ್.ಪಿ.ಎಲ್. ಸಂಸ್ಥೆಯ ಮಹಾಪ್ರಬಂಧಕ ಪ್ರಶಾಂತ್ ಬಾಳಿಗ, ಆಳ್ವಾಸ್ ಮೂಡುಬಿದಿರೆ ಸಂಸ್ಥೆಯ ವಿವೇಕ ಆಳ್ವ, ಆಲಿಗ್ರೋ ಸಂಸ್ಥೆಯ ಆಡಳಿತ ನಿರ್ದೇಶಕ ಧರ್ಮೇಂದ್ರ ಮೆಹ್ತಾ ಮತ್ತು ಎಸ್.ಸಿ.ಎಸ್. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜೀವ್‌ರಾಜ್ ಆಳ್ವ, ಎ.ಕೆ. ಬನ್ಸಾಲ್ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಅಭಿನವ್ ಬನ್ಸಾಲ್, ನಗರದ ಖ್ಯಾತ ವಕೀಲ ಪದ್ಮರಾಜ್ ಪೂಜಾರಿ ಮತ್ತು ಮುಂಬಯಿ ನಗರದ ತ್ರಿರಂಗ ಸಂಗಮ ಸಂಸ್ಥೆಯ ಮಾಲೀಕ ಮೋಹನ್ ರೈ ಇದ್ದರು. ಶ್ವೇತಾದ್ವೀಪ ದಾಸ ನಿರೂಪಿಸಿದರು.