ಕನ್ನಡಪ್ರಭ ವಾರ್ತೆ ನಾಪೋಕ್ಲುಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಅನನ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.
ಇಲ್ಲಿಗೆ ಸಮೀಪದ ಕಕ್ಕಬೆ ಕುಂಜಿಲ ಗ್ರಾಮದ (ಕುಂಜಿಲ ಪರಂಬು) ಕೆ.ಪಿ. ಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.ಜಗತ್ತು ಕ್ಷಿಪ್ರಗತಿಯಲ್ಲಿ ಬದಲಾವಣೆ ಆಗುತ್ತಿದೆ. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲೀಕರಣ ಅತ್ಯವಶ್ಯಕ. ನಗರ ಪ್ರದೇಶಗಳಲ್ಲಿ ತಾಂತ್ರಿಕತೆ ಬಹಳ ಮುಂದುವರಿದಿದ್ದು ವಿದ್ಯಾರ್ಥಿಗಳು ಬದಲಾದ ಆಧುನಿಕತೆಗೆ ಹೊಂದಿಕೊಳ್ಳುತ್ತಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಡಿಜಿಟಲ್ ಜಗತ್ತಿನಲ್ಲಿ ಸಾಧಕ ಬಾದಕಗಳು ಇದ್ದು ಅದರಲ್ಲಿ ಸಾಧಕಗಳನ್ನು ಮಾತ್ರ ಆಯ್ಕೆ ಮಾಡಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕಾಗಿದೆ ಎಂದರು.
ಸಾಮಾಜಿಕ ಜಾಲತಾಣಗಳ ದುರುಪಯೋಗವಾಗುತ್ತಿದೆ. ಅದರಲ್ಲಿ ಬಹುಬೇಗನೆ ಬಿತ್ತರವಾಗುವ ತಪ್ಪು ಮಾಹಿತಿಗಳಿಂದ ದೂರವಿದ್ದು ಉತ್ತಮವಾದದನ್ನು ಮಾತ್ರ ಆಯ್ಕೆ ಮಾಡಿ ಉಪಯೋಗ ಪಡೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅವರ ಮುಂದಿನ ಭವಿಷ್ಯ ಉಜ್ವಲವಾಗಲು ಎಲ್ಲಾ ರೀತಿಯ ಅವಕಾಶಗಳನ್ನು ಕಲ್ಪಿಸಿ ಕೊಡಬೇಕಾಗಿದೆ .ಶಾಲೆಯ ಮಕ್ಕಳಿಗೆ ಡಿಜಿಟಲೀಕರಣಕ್ಕೆ ಒತ್ತು ನೀಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇಲ್ಲಿನ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರುವಂತಾಗಲಿ ಎಂದರುಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ವತಿಯಿಂದ ಶಾಸಕ ಪೊನ್ನಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಕ್ಕಬೆ ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿಲ್ಪಾ ಲೋಕೇಶ್, ಉಪಾಧ್ಯಕ್ಷೆ ಕಲಿಯಂಡ ಬೀನಾನವೀನ್, ಸದಸ್ಯರಾದ ಬಶೀರ್ ಪೊಯಕ್ಕರೆ, ಕುಂಡಡ ರಜಾಕ್ ,ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಸಫಿಯಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಮಾಜಿ ಅಧ್ಯಕ್ಷ ಕರ್ತಂಡ ಶೈಲ ಕುಟ್ಟಪ್ಪ, ಮಾಜಿ ಸದಸ್ಯ ಬಾಚಮಂಡ ಲವ ಚಿನ್ನಪ್ಪ, ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ, ಕುಡಿಯರ ಮುತ್ತಪ್ಪ , ಕೈಬುಳಿರ ರಾಮಯ್ಯ ಮಾಸ್ಟರ್, ಪಕ್ರು ಮಾಸ್ಟರ್, ನಿವೃತ್ತ ಪೊಲೀಸ್ ಅಧಿಕಾರಿ ಮೂಸ, ಕೆಪಿ ಬಾಣೆ ಶಾಲಾ ಮುಖ್ಯ ಶಿಕ್ಷಕಿ ಪಿ.ಕೆ ಗಂಗಮ್ಮ ,ಶಾಲಾ ಆಡಳಿತ ಮಂಡಳಿ ಮಂಡಳಿ ಪದಾಧಿಕಾರಿಗಳು, ಶಿಕ್ಷಕ ವೃಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.