ಕಾನೂನು ಸಲಹಾ ಕೇಂದ್ರದ ಉದ್ಘಾಟನೆ, ಕಾನೂನು ಅರಿವು ಕಾರ್ಯಕ್ರಮ

KannadaprabhaNewsNetwork |  
Published : Sep 07, 2026, 02:30 AM IST
ಶಿಗ್ಗಾಂವಿ ತಾಲೂಕು ಅರಟಾಳ ಗ್ರಾಮ ವೀರಭದ್ರೇಶ್ವರ ದೇವಸ್ಥಾನ ಸಭಾಭವನದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲೆಯ ಹೊಸೂರ ಗ್ರಾಪಂ ಅರಟಾಳ ಗ್ರಾಮವನ್ನು ಆಯ್ದುಕೊಳ್ಳಲಾಗಿದೆ. ಈ ಯೋಜನೆಯು 60 ದಿನಗಳವರೆಗೆ ತಮ್ಮ ಗ್ರಾಮದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವೇಂದ್ರಪ್ಪ ಎನ್. ಅವರು ಹೇಳಿದರು.

ಹಾವೇರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲೆಯ ಹೊಸೂರ ಗ್ರಾಪಂ ಅರಟಾಳ ಗ್ರಾಮವನ್ನು ಆಯ್ದುಕೊಳ್ಳಲಾಗಿದೆ. ಈ ಯೋಜನೆಯು 60 ದಿನಗಳವರೆಗೆ ತಮ್ಮ ಗ್ರಾಮದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವೇಂದ್ರಪ್ಪ ಎನ್. ಅವರು ಹೇಳಿದರು.

ಶಿಗ್ಗಾಂವಿ ತಾಲೂಕಿನ ಅರಟಾಳ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಸಭಾಭವನದಲ್ಲಿ ಸೆ.4ರಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿಗ್ಗಾಂವಿ ತಾಲೂಕು ಕಾನೂನು ಸೇವೆಗಳ ಸಮಿತಿ, ಜಿಲ್ಲಾ ಪಂಚಾಯತ್, ತಾ.ಪಂ. ಹಾಗೂ ಹೊಸೂರ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಜರುಗಿದ 60 ದಿನಗಳ ಮೆಗಾ ಡ್ರೈವ್ ಕಾರ್ಯಕ್ರಮ ಅಂಗವಾಗಿ, ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಮ್ಮ ಊರಿನ ಹಾಗೂ ತಮ್ಮ ಸಮಸ್ಯೆಗಳನ್ನು ಇಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ತಮ್ಮ ಮನೆ ಬಾಗಿಲಿಗೆ ಸರ್ವೇ ಕಾರ್ಯಕ್ಕಾಗಿ ಅರೆಕಾಲಿಕ ಸ್ವಯಂ ಸೇವಕರು ಸಂಗ್ರಹಣಾ ನಮೂನೆಯೊಂದಿಗೆ ಬರಲಿದ್ದು, ಅವರು ಕೇಳುವ ಮಾಹಿತಿಯನ್ನು ಸರಿಯಾಗಿ ನೀಡಬೇಕು. ಸರಿಯಾದ ಮಾಹಿತಿ ನೀಡಿದಲ್ಲಿ ತಮ್ಮ ಸಮಸ್ಯೆಗಳು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 13 ಯೋಜನೆಗಳಡಿ ಬರುತ್ತಿದ್ದರೆ, ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಂ.ಜಿ. ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು.

ನ್ಯಾಯಾಧೀಶರಾದ ಸುನಿಲ ತಳವಾರ, ಅಶ್ವಿನಿ ಚಂದ್ರಕಾಂತ, ಗ್ರಾ.ಪಂ. ಪ್ರಭಾರ ಅಧ್ಯಕ್ಷ ನಿಂಬಣ್ಣ ಹೊಸಮನಿ, ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣನವರ, ಕಾನೂನು ನೆರವು ಮುಖ್ಯ ಅಭಿರಕ್ಷಣಾ ವಕೀಲ ವಿ.ಜಿ. ದೊಡ್ಡಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ಶಿಗ್ಗಾಂವಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಬಿ. ಲಕ್ಕಣ್ಣನವರ, ಕಾರ್ಯದರ್ಶಿ ವಿವೇಕ ರಾಮಗೇರಿ, ವಿಕಲಚೇತನ ಕಲ್ಯಾಣಾಧಿಕಾರಿ ಆಶು ನದಾಫ್, ಗ್ರಾಮದ ಹಿರಿಯ ನಾಗರಿಕ ವೀರೇಶ ಪಾಟೀಲ, ಪಿಡಿಒ ಅವಿನಾಶ ಅಂಗರಗಟ್ಟಿ ಇತರರು ಭಾಗವಹಿಸಿದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಜೆಎಂಎಫ್‌ಸಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್. ಅವರು ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ ವೃದ್ಧಿ: ಎಸ್ಪಿ ದೀಪನ್ ಎಂ.ಎನ್.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಜಾಸೇವಾ ಆಂದೋಲನದಲ್ಲಿ 1383 ಅರ್ಜಿ ಸಲ್ಲಿಕೆ