ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ವಿವಿ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಯುವ ಸಂಭ್ರಮ ಕಾರ್ಯಕ್ರಮವನ್ನು ಮಂಗಳವಾರ ರಾತ್ರಿ ಉದ್ಘಾಟಿಸಿ ಮಾತನಾಡಿದ ಅವರು, ಯುವ ಸಂಭ್ರಮದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ನಡೆಯಲಿದ್ದು, ಅಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಪ್ರತಿಯೊಬ್ಬರೂ ನೋಡಬೇಕು. ಕಾರ್ಯಕ್ರಮ ನೀಡಲು ಬಂದಿರುವಂತಹ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಅವರಲ್ಲಿ ಇನ್ನು ಹೆಚ್ಚಿನ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದು ಹೇಳಿದರು.
ಯುವ ಸಂಭ್ರಮದಲ್ಲಿ ಭಾಗವಹಿಸಬೇಕೆಂದು ರಾಜ್ಯದ 470 ಕಾಲೇಜುಗಳಿಂದ ಯುವ ಪ್ರತಿಭೆಗಳು ಅರ್ಜಿ ಸಲ್ಲಿಸಿದ್ದು, 150 ಕಾಲೇಜುಗಳು ಆಯ್ಕೆಯಾಗಿ 120 ಕಾಲೇಜುಗಳನ್ನು ಕೈ ಬಿಡಲಾಗಿತ್ತು. ಆದರೆ, ಯಾವುದೇ ಪ್ರತಿಭೆಗಳಿಗೆ ಮೋಸವಾಗಬಾರದು ಎಂಬ ಕಾರಣದಿಂದ ಯುವ ಸಂಭ್ರಮವನ್ನು ಒಂದು ದಿನ ಹೆಚ್ಚು ಮಾಡಿ ಅವರಿಗೂ ಅವಕಾಶ ಮಾಡಿಕೊಡಲಾಗಿದೆ ಎಂದರು.ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ನಟ ಶ್ರೀಮುರುಳಿ, ನಟಿ ರುಕ್ಮಿಣಿ ವಸಂತ್, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಬಿ. ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ್ ಮೊದಲಾದವರು ಇದ್ದರು.ಸಂಸ್ಕೃತಿಯಲ್ಲಿ ಧರ್ಮ ಒಂದು ಭಗವಾಗಿದ್ದು, ಧರ್ಮವೇ ಸಂಸ್ಕೃತಿಯಲ್ಲ. ಎಲ್ಲಾ ಯುವ ಪೀಳಿಗೆಗಳು ಇದನ್ನು ಅರಿತು ಎಲ್ಲರಿಗೂ ಸಮಾನತೆಯನ್ನು ತಂದುಕೊಟ್ಟಿರುವ ಸಂವಿಧಾನದ ಆಶಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆ ಮತ್ತು ಭಾತೃತ್ವವನ್ನು ಬೆಳೆಸಬೇಕು.
----
- ಶ್ರೀಮುರುಳಿ, ನಟ
ವಿಶ್ವ ವಿಖ್ಯಾತ ನಾಡಹಬ್ಬದಲ್ಲಿ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಮೈಸೂರು ಜನತೆ ಯಾವಾಗಲು ನಮ್ಮ ಮೇಲೆ ಚಿತ್ರ ರಂಗದ ಮೇಲೆ ಇಟ್ಟಿರುವ ಪ್ರೀತಿಗೆ ಎಂದಿಗೂ ಚಿರಋಣಿ.
-----
ಯುವ ಸಂಭ್ರಮದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಿವಿಧ ಹಾಡುಗಳಿಗೆ ಹೆಜ್ಜೆ ಹಾಕಿ ನೆರೆದಿದ್ದವರನ್ನು ಮೂಕವಿಸ್ಮಿತಗೊಳಿಸಿದರು. ಮೊದಲ ದಿನ ಸಾಂಸ್ಕೃತಿಕ ನೃತ್ಯವೈಭವವನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡರು. ನಗರದ ಹಲವು ಭಾಗಗಳಿಂದ ಕಾರ್ಯಕ್ರಮಕ್ಕೆ ಬಂದಿದ್ದ ಯುವಸ್ತೋಮ ಪ್ರತಿ ಹಾಡುಗಳಿಗೂ ಹುಚ್ಚೆದ್ದು ಕುಣಿದರು. ಜತೆಗೆ ಪ್ರತಿ ನೃತ್ಯಗಳಿಗೆ ಚಪ್ಪಾಳೆ, ಕೇಕೆ ಹಾಕುತ್ತಾ ಪ್ರೋತ್ಸಾಹಿಸಿದರು. ಮೊದಲ ದಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಅನಾವರಣ ಮಾಡಿದರು.