ಮನ್ಮುಲ್ ನಿರ್ದೇಶಕರ ನೂತನ ಕಚೇರಿ ಉದ್ಘಾಟನೆ

KannadaprabhaNewsNetwork |  
Published : Feb 18, 2025, 12:32 AM IST
17ಕೆಎಂಎನ್ ಡಿ12 | Kannada Prabha

ಸಾರಾಂಶ

ಹಾಲು ಉತ್ಪಾದಕರ ಸಹಕಾರ ಸಂಘದ ಮತದಾರರು ನನ್ನ ಮೇಲೆ ಭರವಸೆ ಇಟ್ಟು ಅಧಿಕ ಮತಕೊಟ್ಟು ಗೆಲ್ಲಿಸಿದ್ದಾರೆ. ಅದಕ್ಕೆ ಚ್ಯುತಿಬಾರದಂತೆ ಕೆಲಸ ಮಾಡುತ್ತೇನೆ. ಒಕ್ಕೂಟಗಳಿಂದ ದೊರೆಯುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಹಾಲು ಉತ್ಪಾದಕ ರೈತರಿಗೆ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ ಮನ್ಮುಲ್ ಉಪ ಕಚೇರಿಯಲ್ಲಿ ನೂತನ ಕಚೇರಿಯನ್ನು ನಿರ್ದೇಶಕ ಸಿ.ಶಿವಕುಮಾರ್ ಸೋಮವಾರ ಉದ್ಘಾಟಿಸಿದರು.

ಪಟ್ಟಣದ ಕಚೇರಿಯಲ್ಲಿ ಗಣಪತಿ ಪೂಜೆ ಸಲ್ಲಿಸಿದ ಬಳಿಕ ಉದ್ಘಾಟಿಸಿ ಅಧಿಕಾರ ಸ್ವೀಕರಿಸಿದ ನಂತರ ಸಿ.ಶಿವಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಇದೇ ಮೊದಲ ಬಾರಿಗೆ ಕಚೇರಿಗೆ ಆಗಮಿಸಿ ಕಚೇರಿಗೆ ಪೂಜೆಸಲ್ಲಿಸಿ ಅಧಿಕಾರ ಸ್ವೀಕರಿಸಿದ್ದೇನೆ. ಡೇರಿ ಕಾರ್ಯದರ್ಶಿಗಳು, ಮನ್ಮುಲ್ ನ ಎಲ್ಲಾ ಅಧಿಕಾರಿಗಳ ಸಹಕಾರ ಪಡೆದು ಹಾಲು ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.

ಹಾಲು ಉತ್ಪಾದಕರ ಸಹಕಾರ ಸಂಘದ ಮತದಾರರು ನನ್ನ ಮೇಲೆ ಭರವಸೆ ಇಟ್ಟು ಅಧಿಕ ಮತಕೊಟ್ಟು ಗೆಲ್ಲಿಸಿದ್ದಾರೆ. ಅದಕ್ಕೆ ಚ್ಯುತಿಬಾರದಂತೆ ಕೆಲಸ ಮಾಡುತ್ತೇನೆ. ಒಕ್ಕೂಟಗಳಿಂದ ದೊರೆಯುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಹಾಲು ಉತ್ಪಾದಕ ರೈತರಿಗೆ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಹಾಲು ಉತ್ಪಾದನೆಯಲ್ಲಿ ತಾಲೂಕು ಎರಡನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಹಳ್ಳಿಹಳ್ಳಿಗಳಲ್ಲಿ ರೈತರಿಗೆ ಹೈನುಗಾರಿಕೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುವುದು. ಹೈನುಗಾರಿಕೆಯಿಂದಲೇ ಗ್ರಾಮೀಣ ಪ್ರದೇಶದಲ್ಲಿ ಹಲವು ಕುಟುಂಬಗಳು ಆರ್ಥಿಕವಾಗಿ ಸಬಲೀಕರಣಗೊಂಡಿವೆ. ವಿದ್ಯಾವಂತ ಯುವಕ- ಯುವತಿಯರು ಹೈನೋದ್ಯಮದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಒಕ್ಕೂಟದ ಅಧಿಕಾರಿಗಳು, ಮುಖಂಡರು ನೂತನ ನಿರ್ದೇಶಕ ಸಿ.ಶಿವಕುಮಾರ್ ಅವರನ್ನು ಅಭಿನಂಧಿಸಿದರು. ಮನ್ಮುಲ್ ಉಪವ್ಯವಸ್ಥಾಪಕ ಆರ್.ಪ್ರಸಾದ್, ಮುಖಂಡರಾದ ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಶ್ಯಾದನಹಳ್ಳಿ ಚಲುವರಾಜು, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಿ.ಎಸ್.ನಿಂಗೇಗೌಡ, ತಾಪಂ ಮಾಜಿ ಸದಸ್ಯ ಸಿ.ಎಸ್.ಗೋಪಾಲಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ರಾಮಕೃಷ್ಣೇಗೌಡ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಶಿವಕುಮಾರ್, ಮಹೇಶ್, ಮನ್ಮುಲ್ ಮಾಜಿ ನಿರ್ದೇಶಕ ಜಿ.ಈ.ರವಿಕುಮಾರ್, ಡೇರಿ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಡಿಂಕಾಶಿವಪ್ಪ, ಉಪಾಧ್ಯಕ್ಷ ಬೋರೇಗೌಡ, ಗೋವಿಂದರಾಜು, ಬೆಟ್ಟಹಳ್ಳಿ ಸುರೇಶ್, ಪುರಸಭೆ ಸದಸ್ಯರಾದ ಆರ್.ಸೋಮಶೇಖರ್, ಗಿರೀಶ್, ಅಂಕಗಜೇಂದ್ರ, ಪ್ರಭಾಕರ್, ಬಲರಾಮು, ಅರಳಕುಪ್ಪೆ ಮಹದೇವು, ಡಾ.ಸಂತೋಷ, ಡಾ.ಪ್ರಕಾಶ್ ಸೇರಿ ಮಾರ್ಗ ವಿಸ್ತರ್ಣಾಧಿಕಾರಿಗಳು, ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಬಿಲ್‌ ಬಾಕಿದಾರರಿಗೆ ಶುಭ ಸುದ್ದಿ : ಬಡ್ಡಿ, ದಂಡ ಪೂರ್ಣ ಮನ್ನಾ।
ಡ್ರಗ್ಸ್‌ ದಂಧೆಯಲ್ಲಿ ಕಾಂಗ್ರೆಸ್‌ ನಿಕಟವರ್ತಿಗಳ ಕೈವಾಡ: ಶಾಸಕ ಅಶ್ವತ್ಥನಾರಾಯಣ