ಕನ್ನಡಪ್ರಭ ವಾರ್ತೆ ಮಡಿಕೇರಿ
ಶುಕ್ರವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ೩೦೦ ಹಾಸಿಗೆ ಆಸ್ಪತ್ರೆಯಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ ೫೫ ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಬಿಡುಗಡೆಗೆ ಪ್ರಯತ್ನಿಸಲಾಗುವುದು. ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿ ಆಸ್ಪತ್ರೆಯ ಸೇವೆ ಒದಗಿಸಲಾಗುತ್ತಿದೆ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿನ ಖಾಲಿ ಇರುವ ವೈದ್ಯರ ಹುದ್ದೆಗಳು, ತಜ್ಞರು ಹಾಗೂ ಇತರರ ನೇಮಕ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.ಬಳಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು.
ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಸುಜಾತ ರಾಥೋಡ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ಡಾ.ರೂಪೇಶ್ ಗೋಪಾಲ್, ಡಾ.ಲೋಕೇಶ್, ವಿವಿಧ ವಿಭಾಗದ ಮುಖ್ಯಸ್ಥರು ಇತರರು ಇದ್ದರು.