ಕನ್ನಡಪ್ರಭ ವಾರ್ತೆ ಮಡಿಕೇರಿ
ಈ ಹಿಂದೆ ಅಯ್ಯಂಗೇರಿ ಗ್ರಾಮ ಪಂಚಾಯತ್ ಸ್ವಂತ ಕಟ್ಟಡ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದು, ಗಮನಿಸಿದ ಶಾಸಕರು, ನೂತನ ಕಟ್ಟಡಕ್ಕೆ ಮಂಜೂರಾತಿ ಒದಗಿಸಿದ್ದರು.
ಸುಸಜ್ಜಿತವಾಗಿ ನಿರ್ಮಾಣಗೊಂಡ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶಾಸಕರು, ಗ್ರಾಮ ಪಂಚಾಯತ್ ಜವಾಬ್ದಾರಿ ಸಂವಿಧಾನದ ಅಡಿಯಲ್ಲಿ ಅತ್ಯಂತ ಪ್ರಮುಖವಾಗಿದ್ದು. ಗ್ರಾಮದ ಜನರಿಗೆ ನೇರವಾಗಿ ಸಂಪರ್ಕಕ್ಕೆ ಸಿಗುವ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಪ್ರತಿನಿಧಿಗಳಂತೆ ಜನರ ಕಷ್ಟಗಳಿಗೆ ಸ್ಪಂದಿಸಲು ತುಂಬಾ ಅನುಕೂಲಕರವಾಗಿದೆ ಎಂದರು.ಗ್ರಾಮ ಪಂಚಾಯತ್ ಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಜನಸೇವೆಯ ಉದ್ದೇಶದಿಂದ ಚುನಾವಣೆಗೆ ನಿಲ್ಲಬೇಕೆ ಹೊರತು ಪ್ರತಿಷ್ಠೆಗೆ ಅಲ್ಲ ಎಂದು ಸಲಹೆ ನೀಡಿದರು.
ಈ ಸಂದರ್ಭ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ ಗ್ರಾಮ ಪಂಚಾಯತ್ ಮೂಲಕ ಗ್ರಾಮೀಣ ಜನರಿಗೆ ಹೆಚ್ಚು ಕೆಲಸಗಳು ಆಗಲಿ, ಆ ನಿಟ್ಟಿನಲ್ಲಿ ಗ್ರಾಮದ ಮೂಲ ಸೌಲಭ್ಯಕ್ಕೆ ಒತ್ತು ನೀಡಬೇಕು ಎಂದು ಸಲಹೆ ಮಾಡಿದರು.ಪಂಚಾಯಿತಿ ಅಧ್ಯಕ್ಷರಾದ ಪುಷ್ಪ ಮತ್ತು ಉಪಾಧ್ಯಕ್ಷರಾದ ಮಿಶ್ರಿಯ, ಪಂಚಾಯಿತಿ ಸದಸ್ಯರು ಆದ ನಾಳಿಯಂಡ ಪಟ್ಟು ಚಂಗಪ್ಪ, ಆಚಿರ ಕಾವೇರಮ್ಮ, ಪ್ರಮುಖರಾದ ಇಸ್ಮಾಯಿಲ್ ಮತ್ತು ರಶೀದ್, ಅಬ್ದುಲ್ ರೆಹಮಾನ್, ಸಾಬಿರ್ ಜಲೀಲ್, ಮಮ್ಮಧ್, ಬಷೀರ್, ಸೂರಜ್ ಹೊಸೂರು, ಮಣವಟ್ಟಿರ ದಯಾ ಚಿಣ್ಣಪ್ಪ, ತೋಲಂಡ ನಂದ, ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ, ಇತರರು ಇದ್ದರು