ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ

KannadaprabhaNewsNetwork |  
Published : Jul 30, 2026, 03:00 AM IST
ಬಿ.ಎಂ.ಪಾಟೀಲರ ಪುಣ್ಯಸ್ಮರಣೆಯ ಅಂಗವಾಗಿ ಮಮದಾಪುರದಲ್ಲಿ ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ದಿ. ಬಿ.ಎಂ.ಪಾಟೀಲರ ಪುಣ್ಯಸ್ಮರಣೆಯ ಅಂಗವಾಗಿ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಿಂದ ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಸೋಮವಾರ ನಡೆಯಿತು. ಆರೋಗ್ಯ ಕೇಂದ್ರವನ್ನು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ದಿ. ಬಿ.ಎಂ.ಪಾಟೀಲರ ಪುಣ್ಯಸ್ಮರಣೆಯ ಅಂಗವಾಗಿ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಿಂದ ನೂತನ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನೆ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಸೋಮವಾರ ನಡೆಯಿತು. ಆರೋಗ್ಯ ಕೇಂದ್ರವನ್ನು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.

ಡಾ.ತೇಜಸ್ವಿನಿ ವಲ್ಲಭ ಮಾತನಾಡಿ, ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಅವರ ಸಮೀಪದಲ್ಲೇ ಒದಗಿಸುವ ಉದ್ದೇಶದಿಂದ ಈ ಗ್ರಾಮೀಣ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿಎಲ್‌ಡಿಇ ಸಂಸ್ಥೆ ಸದಾ ಬದ್ಧವಾಗಿದೆ ಎಂದರು.

ಈ ವೇಳೆ ಗಣ್ಯರು ದಿ.ಬಿ.ಎಂ.ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬೆಳಿಗ್ಗೆ 10 ರಿಂದ ಸಂಜೆ 4.30ರ ವರೆಗೆ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ತಜ್ಞರು ಕಾಯಿಲೆಗಳ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಔಷಧಿಗಳನ್ನು ವಿತರಿಸಿದರು. ಒಟ್ಟು 276 ಮಂದಿ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅವರಲ್ಲಿ 40 ಜನರನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ನಗರದ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಶಿಪಾರಸು ಮಾಡಲಾಯಿತು. ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಕುಲಾಧಿಪತಿ ಬಿ.ಎಂ.ಪಾಟೀಲ, ಕುಲಪತಿ ಡಾ.ಅರುಣ ಇನಾಮದಾರ, ಹಿರಿಯ ಉಪ ಪ್ರಾಂಶುಪಾಲ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ, ಉಪವೈದ್ಯಕೀಯ ಅಧೀಕ್ಷಕ ಡಾ.ರವಿಕುಮಾರ ಬಿರಾದಾರ, ಮುಖಂಡರಾದ ಮಲ್ಲಿಕಾರ್ಜುನ ಗಂಗೂರ, ಮಧ್ವಾಚಾರ ಕುಲಕರ್ಣಿ, ಡಾ.ಕೌಸರನಿಯಾಜ್ ಅತ್ತಾರ, ಪ್ರಶಾಂತ ದೇಸಾಯಿ, ಲಕ್ಷ್ಮಣ ತೇಲಿ, ಪ್ರಕಾಶ ಸೊನ್ನದ, ಹನುಮಂತ.ಎಚ್, ಗ್ರಾಮೀಣ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದು ರಾಠೋಡ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚತುರ್ಮಾಸ: ಜೈನಮುನಿಗಳ ಅದ್ಧೂರಿ ಪುರಪ್ರವೇಶ
ಅಕ್ಕಮಹಾದೇವಿ ವಿವಿ ಮಹಿಳಾ ಶಿಕ್ಷಣದಲ್ಲಿ ರಾಜ್ಯಕ್ಕೆ ಮಾದರಿ