ಶ್ರೀದೊಡ್ಡಕೇರಮ್ಮ ದೇವಿ ನೂತನ ದೇವಾಲಯ ಉದ್ಘಾಟನೆ; ಶ್ರೀರಥ ಲೋಕಾರ್ಪಣೆ

KannadaprabhaNewsNetwork |  
Published : Apr 19, 2025, 12:33 AM IST
18ಕೆಎಂಎನ್ ಡಿ26,27 | Kannada Prabha

ಸಾರಾಂಶ

ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರೆಯುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೂಡ ಲಭಿಸುತ್ತದೆ. ನಮ್ಮ ಪೂರ್ವಿಕರಿಂದ ಕೊಡುಗೆಯಾಗಿ ಬಂದಿರುವ ಆಚಾರ ವಿಚಾರಗಳನ್ನು ನಾವೆಲ್ಲರೂ ಪಾಲಿಸುವ ಜೊತೆಗೆ ಇತರರ ಆಚಾರ ವಿಚಾರಗಳನ್ನು ಗೌರವಿಸಿ ಶಾಂತಿಯುತ ಸಮಾಜ ನಿರ್ಮಾಣ ಮಾಡೋಣ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದ ಗ್ರಾಮ ದೇವತೆ ಶ್ರೀದೊಡ್ಡಕೇರಮ್ಮ ದೇವಿ ನೂತನ ದೇವಾಲಯದ ಉದ್ಘಾಟನೆ ಹಾಗೂ ಶ್ರೀರಥದ ಲೋಕಾರ್ಪಣೆ ಸಮಾರಂಭ ಅದ್ಧೂರಿಯಾಗಿ ನಡೆಯಿತು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಮೈಸೂರು ಕೊಡಗು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ದೇವಾಲಯದ ಗೋಪುರದ ಕಳಸ ಪ್ರತಿಷ್ಠಾಪನೆ ಕಾರ್ಯದಲ್ಲಿ ಭಾಗವಹಿಸಿ ಪಟ್ಟಣಿಗರು ನೀಡಿದ ಆತ್ಮೀಯ ಅಭಿನಂದನೆ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ನಮ್ಮ ಸಂಸ್ಕೃತಿ ಹಾಗೂ ಪರಂಪರೆ ಪ್ರತಿಬಿಂಬವಾಗಿರುವ ದೇವಾಲಯಗಳನ್ನು ಸಂಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರೆಯುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೂಡ ಲಭಿಸುತ್ತದೆ. ನಮ್ಮ ಪೂರ್ವಿಕರಿಂದ ಕೊಡುಗೆಯಾಗಿ ಬಂದಿರುವ ಆಚಾರ ವಿಚಾರಗಳನ್ನು ನಾವೆಲ್ಲರೂ ಪಾಲಿಸುವ ಜೊತೆಗೆ ಇತರರ ಆಚಾರ ವಿಚಾರಗಳನ್ನು ಗೌರವಿಸಿ ಶಾಂತಿಯುತ ಸಮಾಜ ನಿರ್ಮಾಣ ಮಾಡೋಣ ಎಂದರು.

ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಅವರನ್ನು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ನೇತೃತ್ವದಲ್ಲಿ ಪ್ರತ್ಯೇಕವಾಗಿ ಬರಮಾಡಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ.ಮಂಜು, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಕಾಂಗ್ರೆಸ್ ಮುಖಂಡ ಸ್ಟಾರ್ ಚಂದ್ರು, ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ಉಪಾಧ್ಯಕ್ಷೆ ಸೌಭಾಗ್ಯ ಉಮೆಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್. ರವೀಂದ್ರಬಾಬು, ಆರ್‌ಟಿಒ ಮಲ್ಲಿಕಾರ್ಜುನ್, ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಪುರಸಭಾ ಸದಸ್ಯರಾದ ಡಿ.ಪ್ರೇಂಕುಮಾರ್, ಗಿರೀಶ್, ಎಚ್.ಎನ್.ಪ್ರವೀಣ್, ಪ್ರಮೋದ್ ಕುಮಾರ್, ಕೆ.ಸಿ.ಮಂಜುನಾಥ್, ನಟರಾಜ್, ಇಂದ್ರಾಣಿ, ಸುಗುಣ, ಮಹಾದೇವಿ ನಂಜುಂಡ, ಬಸ್ ಸಂತೋಷ ಕುಮಾರ್, ಮುಖಂಡ ಕೆ.ಎಸ್. ರಾಮೇಗೌಡ, ಸಾವಿರಾರು ಜನರು ಭಾಗವಹಿಸಿದ್ದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು