ನಿಮಿಷಾಂಬ ದೇಗುಲದ ಬಳಿ ನಮ್ಮ ಕ್ಲಿನಿಕ್ ಉದ್ಘಾಟನೆ

KannadaprabhaNewsNetwork |  
Published : Aug 24, 2025, 02:00 AM IST
23ಕೆಎಂಎನ್ ಡಿ18 | Kannada Prabha

ಸಾರಾಂಶ

ಸ್ಥಳೀಯವಾಗಿ ಜನರಿಗೆ ಉತ್ತಮ ಆರೋಗ್ಯ ಸಿಗುವಂತಾಗಲಿ ಎನ್ನುವ ದೃಷ್ಟಿಯಿಂದ ಸರ್ಕಾರ ಆಧುನಿಕ ತಂತ್ರಜ್ಞಾನವುಳ್ಳ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜೊತೆಗೆ ಸ್ಥಳೀಯವಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಇಂತಹ ಕೇಂದ್ರಗಳು ಸಹಕಾರಿಯಾಗಲಿವೆ. ಆದ್ದರಿಂದ ಸಾರ್ವಜನಿಕರು ಈ ಕ್ಲಿನಿಕ್‌ನ ಸದುಪಯೋಗಪಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನ ಶ್ರೀನಿಮಿಷಾಂಬ ದೇವಸ್ಥಾನ ಬಳಿ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಅನ್ನು ಶಾಸಕ ರಮೇಶ್ ಬಂಡಿಸಿದ್ದೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕರು, ಸ್ಥಳೀಯವಾಗಿ ಜನರಿಗೆ ಉತ್ತಮ ಆರೋಗ್ಯ ಸಿಗುವಂತಾಗಲಿ ಎನ್ನುವ ದೃಷ್ಟಿಯಿಂದ ಸರ್ಕಾರ ಆಧುನಿಕ ತಂತ್ರಜ್ಞಾನವುಳ್ಳ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜೊತೆಗೆ ಸ್ಥಳೀಯವಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಇಂತಹ ಕೇಂದ್ರಗಳು ಸಹಕಾರಿಯಾಗಲಿವೆ. ಆದ್ದರಿಂದ ಸಾರ್ವಜನಿಕರು ಈ ಕ್ಲಿನಿಕ್‌ನ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಡಿಎಚ್‌ಒ ಡಾ.ಕೆ.ಮೋಹನ್ ಮಾತನಾಡಿ, ನಮ್ಮ ಕ್ಲಿನಿಕ್‌ನಲ್ಲಿ ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ, ನವಜಾತ ಶಿಶುಗಳ ಆರೈಕೆ ಮತ್ತು ಚಿಕಿತ್ಸೆ, ಮಕ್ಕಳ ಮತ್ತು ಹದಿಹರೆದವರ ಆರೋಗ್ಯದ ಕಾಳಜಿ, ಲಸಿಕೆ ಸೇವೆ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಸೋಂಕುಗಳ ನಿರ್ವಹಣೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ ಸೇರಿದಂತೆ 12 ರೀತಿಯ ವೈದ್ಯಕೀಯ ಸೇವೆಗಳ ಜೊತೆಗೆ 14 ಬಗೆಯ ಲ್ಯಾಬ್ ಟೆಸ್ಟ್‌ಗಳು, ಟೆಲಿ ಕನ್ಸಲ್ಟೇಶನ್ ಸೌಲಭ್ಯ, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆಗಳು ಉಚಿತವಾಗಿ ದೊರೆಯುತ್ತವೆ. ಅಷ್ಟೇ ಅಲ್ಲದೆ ತಾಲೂಕು ಆಸ್ಪತ್ರೆ ಮೇಲಿರುವ ಒತ್ತಡವು ಕಡಿಮೆ ಆಗುತ್ತಿದೆ. ಆದ್ದರಿಂದ ಸಾರ್ವಜನಿಕರು ಕ್ಲಿನಿಕ್‌ನಲ್ಲಿ ಸಿಗುವ ಆರೋಗ್ಯ ಸೇವೆಗಳನ್ನು ಪಡೆಯಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್ ದಿನೇಶ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಆಶಾಲತಾ ಎಂ.ಎನ್. ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ. ಗಣೇಶ್ ಪ್ರಸಾದ, ಪುರಸಭಾ ಸದಸ್ಯರಾದ ನಂದೀಶ್, ಕೃಷ್ಣಪ್ಪ, ದಯಾನಂದ, ನರಸಿಂಹಗೌಡ, ಮಂಗಳಮ್ಮ, ನಿಂಗರಾಜು, ನಿರ್ಮಲ ವೇಣುಗೋಪಾಲ್, ನಂದೀಶ್ .ಎಸ್ ಸೇರಿದಂತೆ ಸಾರ್ವಜನಿಕ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸೋಮ ಸುಂದರ್, ಅನಿಲ್ ಕುಮಾರ, ದೇವರಾಜು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮುಖಂಡರು, ಸಾರ್ವಜನಿಕರು ಇದ್ದರು.

PREV

Recommended Stories

ಯಾವಾಗ ಬೇಕಿದ್ದರೂ ಸಂಪುಟ ಪುನರ್‌ ರಚನೆ : ಗುಂಡೂರಾವ್‌
9 ತಿಂಗಳಲ್ಲಿ 158 ಕಾರ್ಖಾನೆಗಳ ಮುಚ್ಚಲು ಮಂಡಳಿಯ ನೋಟಿಸ್‌