ಹಿರಿಯಡ್ಕ ಪ್ರಾ.ಆ. ಕೇಂದ್ರದಲ್ಲಿ ಫಿಸಿಯೋಥೆರಪಿ ಘಟಕ ಉದ್ಘಾಟನೆ

KannadaprabhaNewsNetwork |  
Published : Jul 31, 2024, 01:04 AM IST
ಹಿರಿಯಡ್ಕ30 | Kannada Prabha

ಸಾರಾಂಶ

ಹಿರಿಯಡ್ಕ ಆರೋಗ್ಯ ಕೇಂದ್ರದಲ್ಲಿ ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ಹಿರಿಯಡ್ಕ

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರವು ಮಂಗಳವಾರ ಆಯೋಜಿಸಲಾಗಿತ್ತು.

ಮಾಹೆಯ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಫ್ರೊಫೆಶನ್‌ನ ಹಿರಿಯ ವೈದ್ಯ ಡಾ. ಅರುಣ್ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಎಂಡೋಸಲ್ಫಾನ್ ಸೇರಿದಂತೆ ದೈಹಿಕ ಅಂಗವಿಕಲತೆ ಇರುವ ಎಲ್ಲ ದಿವ್ಯಾಂಗರು ಈ ಘಟಕದಲ್ಲಿ ದೊರಕುವ ಫಿಸಿಯೋಥೆರಪಿ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಮಾತನಾಡಿ, ಈ ಭಾಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಫಿಸಿಯೋಥೆರಪಿ ಘಟಕವನ್ನು ಪ್ರಾರಂಭಿಸಲಾಗಿದ್ದು, ಸ್ಥಳೀಯ ದಿವ್ಯಾಂಗರು ಸದ್ರಿ ಘಟಕದಲ್ಲಿ ಲಭ್ಯವಿರುವ ಸೇವೆಯನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಎಂಡೋಸಲ್ಫಾನ್ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಜಿ. ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಧ್ಯೇಯೋದ್ದೇಶ ಹಾಗೂ ಫಿಸಿಯೋಥೆರಪಿ ಘಟಕದ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು.

ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಒನ್ ಗುಡ್ ಸ್ಟೆಪ್‌ನ ಆಡಳಿತ ನಿರ್ದೇಶಕಿ ಅಮಿತಾ ಪೈ ಉಪಸ್ಥಿತರಿದ್ದರು.

ಹಿರಿಯಡಕ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸತ್ಯಶಂಕರ್ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಾಬಾಯಿ ಕೆ. ವಂದಿಸಿದರು.

ಶಿಬಿರದಲ್ಲಿ 100ಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಇವರಲ್ಲಿ 30 ಮಂದಿ ಫಿಸಿಯೋಥೆರಪಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅವರನ್ನು ನೋಂದಣಿ ಮಾಡಿಕೊಂಡು, ಮುಂದಿನ ದಿನಗಳಲ್ಲಿ ನಿಯಮಿತವಾಗಿ ಫಿಸಿಯೋಥೆರಪಿ ಸೇವೆ ನೀಡಲಾಗುತ್ತದೆ ಎಂದು ಪ್ರಾ.ಆ. ಕೇಂದ್ರ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ