ಕನ್ನಡಪ್ರಭ ವಾರ್ತೆ ಕಾರ್ಕಳ
ಶಿರಸಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಂ.ಎಸ್ ಪ್ರಸನ್ನಕುಮಾರ್ ಪ್ರೇರಣಾ ಶಿಬಿರ ಸಾಗಿ ಬಂದ ಹಾದಿಯ ಕುರಿತು ಮಾತನಾಡಿದರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಹ ಸಂಸ್ಥಾಪಕ ಗಣಪತಿ ಭಟ್ ಕೆ.ಎಸ್. ಮಾತನಾಡಿ, ಎಸ್.ಎಸ್.ಎಲ್.ಸಿ ಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಪಡೆಯುವ ಸಲುವಾಗಿ ವಿಶೇಷ ತರಬೇತಿ ನೀಡುವ ಈ ಪ್ರೇರಣಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.ಡಯಟ್ ಶಿರಸಿ ಯ ಪ್ರಾಚಾರ್ಯ ಎಂ.ಎಸ್ ಹೆಗಡೆ, ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲಯನ್ ಲೋಕೇಶ್ ಹೆಗಡೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ 6 ತಾಲೂಕಿನ ಕನ್ನಡ ಮತ್ತು ಆಂಗ್ಲ ಮಾಧ್ಯಮ ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಪಾಲಕ ಪೋಷಕರು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಕಾರ್ಕಳದ ಪಿ ಆರ್ ಓ ಲಿಶಾನ್‌ಗೌಡ ಮತ್ತಿತರರು ಪಾಲ್ಗೊಂಡಿದ್ದರು.