ರೋಟರಿ ಉದ್ಯೋಗ್‌-ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರ ಉದ್ಘಾಟನೆ

KannadaprabhaNewsNetwork |  
Published : Sep 18, 2025, 01:11 AM IST
17ರಕ್ತನಿಧಿ | Kannada Prabha

ಸಾರಾಂಶ

ರೋಟರಿ ಉದ್ಯೋಗ್ ರೆಡ್ ಕ್ರಾಸ್ ರಕ್ತ ಕೇಂದ್ರವನ್ನು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಎಲ್‌ಇ (ರವಿ ಕಿರ್ಲೋಸ್ಕರ್) ಆಸ್ಪತ್ರೆಯಲ್ಲಿ ಬುಧವಾರ ಉದ್ಘಾಟಿಸಲಾಯಿತು.

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ಮತ್ತು ರೋಟರಿ ಬೆಂಗಳೂರು ಸಹಯೋಗದಲ್ಲಿ, ರೋಟರಿ ಉದ್ಯೋಗ್ ರೆಡ್ ಕ್ರಾಸ್ ರಕ್ತ ಕೇಂದ್ರವನ್ನು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಎಲ್‌ಇ (ರವಿ ಕಿರ್ಲೋಸ್ಕರ್) ಆಸ್ಪತ್ರೆಯಲ್ಲಿ ಬುಧವಾರ ಉದ್ಘಾಟಿಸಲಾಯಿತು.ಕೇಂದ್ರವನ್ನು ರಾಜ್ಯಪಾಲ ಥಾವರಚಂದ್ ಗೆಹಲೋಥ್‌ ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ರಕ್ತದ ಅವಶ್ಯಕತೆ ಮತ್ತು ಸುರಕ್ಷಿತ ರಕ್ತಸಂಗ್ರಹಣೆಯ ಮಹತ್ವವನ್ನು ವಿವರಿಸಿ, ರೋಟರಿ ಮತ್ತು ರೆಡ್‌ಕ್ರಾಸ್ ಸಂಸ್ಥೆಗಳ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.ರೋಟರಿಯನ್ ಎಲಿಜಬೆತ್ ಚೆರಿಯನ್, ರೋಟರಿ ಉದ್ಯೋಗ್ ಯೋಜನೆ ಕುರಿತು ವಿವರಿಸಿದರು. ಈ ಸಂದರ್ಭ ರಕ್ತದಾನಿಗಳಾದ ಪಿ. ಜಯಶಂಕರ್ ಹಾಗೂ ಎಸ್. ರವಿರಾಜ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ರಾಜ್ಯ ಶಾಖೆಯ ಉಪಸಭಾಪತಿ ಶ್ರೀನಿವಾಸ್ ಹ್ಯಾಟಿ, ಕೆಎಲ್‌ಇ ಸೊಸೈಟಿ ಅಧ್ಯಕ್ಷ ಪ್ರಭಾಕರ ಕೋರೆ ಮತ್ತಿತರರು ಉಪಸ್ಥಿತರಿದ್ದರು. ಐ.ಆರ್.ಸಿ.ಎಸ್ – ಕೆ.ಎಸ್.ಬಿ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ್ ರಾವ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಸೆಂಬ್ಲಿ, ಲೋಕಸಭೆ ಚುನಾವಣೆಗಷ್ಟೇ ಬಿಜೆಪಿ- ಜೆಡಿಎಸ್‌ ಮೈತ್ರಿ
ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ