ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸುಂದರ ವೇದಿಕೆ. ಅವರ ಉತ್ತಮ ಭವಿಷ್ಯವನ್ನು ರೂಪಿಸಲು ಇದು ವೇದಿಕೆಯಾಗಲಿ ಎಂದು ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಹೇಳಿದ್ದಾರೆ. ಚೆಂಬು ಊರುಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ನಡೆದ ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸುಂದರ ವೇದಿಕೆ. ಅವರ ಉತ್ತಮ ಭವಿಷ್ಯವನ್ನು ರೂಪಿಸಲು ಇದು ವೇದಿಕೆಯಾಗಲಿ ಎಂದು ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಹೇಳಿದ್ದಾರೆ.
ಚೆಂಬು ಊರುಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ನಡೆದ ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ ಎಂ.ಪಿ. ಉದ್ಘಾಟಿಸಿದರು.
ಗ್ರಾ.ಪಂ.ಸದಸ್ಯ ರಮೇಶ ಹುಲ್ಲುಬೆಂಕಿ ಮಾತನಾಡಿ, ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ವಿದ್ಯಾರ್ಥಿಗಳ ಪ್ರತಿಭೆಗಳನ್ನು ರಾಷ್ಟ್ರಮಟ್ಟಕ್ಕೆ ಗುರುತಿಸುವ ಕಾರ್ಯಕ್ರಮವಾಗಿದೆ ಎಂದರು. ಗ್ರಾ.ಪಂ.ಚೆಂಬು ಸದಸ್ಯೆ ತಿ ಕುಸುಮ ಹಾಜರಿದ್ದರು.
ಪ್ರತಿಭಾ ಕಾರಂಜಿ ವಿವಿಧ ಹಂತಗಳಲ್ಲಿ ವಿದ್ಯಾರ್ಥಿಗಳ ಸ್ಪರ್ಧಾ ಮನೋಭಾವ ಮೂಡಿಸುವ ಉತ್ತಮ ಕಾರ್ಯಕ್ರಮವಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಡಿಕೇರಿ ತಾಲೂಕು ಅಧ್ಯಕ್ಷ ಮೋಹನ ಪೆರಾಜೆ ಮಾತನಾಡಿ, ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಲ್ಲಿ ಒಂದಾಗಿರುವ ಈ ಪ್ರತಿಭಾ ಕಾರಂಜಿ ಸ್ಪರ್ಧಿಗಳ ಭಾಗವಹಿಸುವಿಕೆ ಮುಖ್ಯ, ಸೋಲು-ಗೆಲವು ಸಾಮಾನ್ಯ, ಅವೆರಡನ್ನೂ ವಿಮರ್ಶೆ ಮಾಡಿ ಆತ್ಮವಿಶ್ವಾಸವನ್ನು ಗಟ್ಟಿಗೊಳಿಸುವಲ್ಲಿ ಪ್ರತಿಭಾ ಕಾರಂಜಿ ಯಶಸ್ವಿಯಾಗಲಿ ಎಂದರು. ಗ್ರಾ.ಪಂ.ಚೆಂಬು ಸದಸ್ಯ ವಸಂತ ಎನ್ ಟಿ, ಸಿ.ಆರ್.ಪಿ ಚಂದ್ರಶೇಖರ, ಮುಖ್ಯಶಿಕ್ಷಕ ಸೋಮಣ್ಣ ಕೆ.ಆರ್. ಇದ್ದರು.
ಏಳು ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ ಸಮಿತಿ, ಪೋಷಕರು, ತೀರ್ಪುಗಾರರಾಗಿ ಪೆರಾಜೆ ಕ್ಲಸ್ಟರಿನ ಶಿಕ್ಷಕರು ಭಾಗಿಯಾಗಿದ್ದರು. ಎಲ್ಲಾ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ನಡೆದು ವಿಜೇತರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.