ನಾಳೆ ಶ್ರೀ ರಂಭಾಪುರೀಶ ನಿವಾಸ ಉದ್ಘಾಟನೆ

KannadaprabhaNewsNetwork |  
Published : Jul 02, 2024, 01:35 AM IST
ಪೋಟೊ: 01ಎಸ್ಎಂಜಿಕೆಪಿ03ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಳಕಿ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಹರಕೆರೆ ಗ್ರಾಮದ ಶಂಕರ ಕಣ್ಣಿನ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭ ಜು.3ರಂದು ನೆರವೇರಲಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಗರದ ಹೊರವಲಯದಲ್ಲಿರುವ ಹರಕೆರೆ ಗ್ರಾಮದ ಶಂಕರ ಕಣ್ಣಿನ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭ ಜು.3ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್‌ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಳಗ್ಗೆ 11ಕ್ಕೆ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡವನ್ನು ಉದ್ಘಾಟಿಸುವರು. ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು ಎಂದರು.

ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಗೌರವಾಧ್ಯಕ್ಷರಾದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು. ಅಧ್ಯಕ್ಷ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಶ್ರೀ ಬ.ವೀ.ಲಿಂ.ಸೇವಾ ಸಮಾಜದ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್, ಅ.ಭಾ.ವೀ.ಲಿಂ.ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎಸ್.ಸಜ್ಜನ, ಪ್ರಧಾನ ಕಾರ್ಯದರ್ಶಿ ಸಿ.ಮಹೇಶ್ ಮೂರ್ತಿ, ನಿರ್ಮಿತಿ ಕೇಂದ್ರದ ಯೋಜನ ವ್ಯವಸ್ಥಾಪಕ ಕೆ.ನಾಗರಾಜ್ . ಪಾರ್ವತಮ್ಮ ಪಂಚಾಕ್ಷರಯ್ಯ, ವೀರಶೈವ ಸಮಾಜದ ಮುಖಂಡ ಎನ್.ಜೆ. ರಾಜಶೇಖರ್, ಎಚ್.ವಿ.ಮರುಳೇಶ ಭಾಗವಹಿಸುವರು. ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿಯ ಎಲ್ಲ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದರು.

ಮಳಲಿ ಡಾ.ನಾಗಭೂಷಣ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಕಡೆನಂದಿಹಳ್ಳಿ ರೇವಣಸಿದ್ದೇಶ್ವರ ಶಿವಾಚಾರ್ಯರು, ಹಣ್ಣೆಮಠದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯರು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಚನ್ನಗಿರಿ ಡಾ.ಕೇದಾರ ಶಿವಶಾಂತವೀರ ಶಿವಾಚಾರ್ಯರು, ನಂದಿಪುರದ ನಂದೀಶ್ವರ ಶಿವಾಚಾರ್ಯರು, ರಟ್ಟಿಹಳ್ಳಿ ವಿಶ್ವೇಶ್ವರ ದೇವರು ನುಡಿನಮನ ಸಲ್ಲಿಸುವರು. ಇದೇ ಸಂದರ್ಭದಲ್ಲಿ ಭೂ ದಾನಿಗಳಾದ ಟಿ.ವಿ.ಈಶ್ವರಯ್ಯ ಸಹೋದರರು ಸೇರಿದಂತೆ ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸುವರು ಎಂದು ತಿಳಿಸಿದರು.

ಬಿಳಕಿ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿ ಮಾತನಾಡಿ, ಇದೊಂದು ಪವಿತ್ರ ಕಾರ್ಯಕ್ರಮವಾಗಿದೆ, ಮಾನವರ ಉದ್ಧಾರಕ್ಕಾಗಿ ಬದುಕಿನ ಕಲ್ಯಾಣಕ್ಕಾಗಿ ರಂಭಪುರಿ ಮಠವು ಶ್ರಮಿಸುತ್ತಿದೆ. ಇಲ್ಲಿ ನಿರ್ಮಾಣವಾಗಿರುವ ಕಟ್ಟಡದಲ್ಲಿ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಮತ್ತು ಸಮಾಜದ ಏಳಿಗೆಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಳಲಿ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಪ್ರಮುಖರಾದ ಸಮಿತಿ ಖಜಾಂಚಿ ಬಿ.ಸಿ.ನಂಜುಂಡಶೆಟ್ಟಿ, ಎಚ್.ವಿ.ಮರುಳೇಶ್, ಶಾಂತಾ ಆನಂದ್, ರವಿ, ಮಹೇಶ್‍ಮೂರ್ತಿ, ದಾನಿಗಳಾದ ಶಿವಕುಮಾರ್, ಶಿವಲಿಂಗಯ್ಯ, ಸಿ.ಎಚ್. ಬಾಳನಗೌಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!