ರೇಷ್ಮೆ ನೂಲು ಬಿಡಿಸುವ ಘಟಕ ಉದ್ಘಾಟನೆ

KannadaprabhaNewsNetwork |  
Published : Oct 06, 2025, 01:00 AM IST
ಬೆಂಡೆಕೆರೆ ಗ್ರಾಮದಲ್ಲಿ ‘ಮೆರಾಜ್ ಟ್ರೇಡರ್ಸ್’ ರೇಷ್ಮೆ ನೂಲು ಬಿಡಿಸುವ ಘಟಕ ಉದ್ಘಾಟನೆ ರೈತರಿಗೆ ಹೊಸ ಆಶಾಕಿರಣ: ಶಾಸಕ ಕೆ.ಎಂ. ಶಿವಲಿಂಗೇಗೌಡ | Kannada Prabha

ಸಾರಾಂಶ

ಬೆಂಡೆಕೆರೆ ಗ್ರಾಮದಲ್ಲಿ ‘ಮೆರಾಜ್ ಟ್ರೇಡರ್ಸ್’ ಸಂಸ್ಥೆಯ ಸ್ವಯಂಚಾಲಿತ ರೇಷ್ಮೆ ನೂಲು ಬಿಡಿಸುವ ಘಟಕದ ಭವ್ಯ ಉದ್ಘಾಟನಾ ಸಮಾರಂಭವು ಭಾನುವಾರ ಜರುಗಿತು. ಘಟಕದ ಉದ್ಘಾಟನೆಯನ್ನು ಶಾಸಕ ಹಾಗೂ ಗೃಹ ಮಂಡಳಿಯ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೆರವೇರಿಸಿದರು. ರೈತರು ರೇಷ್ಮೆಯ ಜೊತೆಗೆ ವಾಣಿಜ್ಯ ಬೆಳೆಗಳತ್ತಲೂ ಗಮನಹರಿಸಿ ಆದಾಯದ ಮಾರ್ಗಗಳನ್ನು ವಿಸ್ತರಿಸಬೇಕು. ರೈತರ ಸಮಸ್ಯೆಗಳಿಗೆ ಸರ್ಕಾರ ಹಾಗೂ ಅಧಿಕಾರಿಗಳು ಸಂವಾದದ ಮೂಲಕ ಪರಿಹಾರ ಕಂಡುಹಿಡಿಯಲು ಬದ್ಧರಾಗಿದ್ದಾರೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ‘ಮೆರಾಜ್ ಟ್ರೇಡರ್ಸ್’ ಸಂಸ್ಥೆಯ ಸ್ವಯಂಚಾಲಿತ ರೇಷ್ಮೆ ನೂಲು ಬಿಡಿಸುವ ಘಟಕದ ಭವ್ಯ ಉದ್ಘಾಟನಾ ಸಮಾರಂಭವು ಭಾನುವಾರ ಜರುಗಿತು. ಘಟಕದ ಉದ್ಘಾಟನೆಯನ್ನು ಶಾಸಕ ಹಾಗೂ ಗೃಹ ಮಂಡಳಿಯ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೆರವೇರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಶಾಸಕರು ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ರಾಜ್ಯ ಸರ್ಕಾರವು ಹಲವು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಈ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯ. ಬೆಂಡೆಕೆರೆ ಗ್ರಾಮದಲ್ಲಿ ಸ್ಥಾಪಿತವಾಗಿರುವ ಈ ಘಟಕವು ಅರಸೀಕೆರೆ ತಾಲೂಕಿನ ಮೊದಲ ರೇಷ್ಮೆ ನೂಲು ಬಿಡಿಸುವ ಘಟಕವಾಗಿದ್ದು, ರೇಷ್ಮೆ ಬೆಳೆಗಾರರಿಗೆ ದೊಡ್ಡ ಅನುಕೂಲವಾಗಲಿದೆ, ಎಂದು ಹೇಳಿದರು.

ಇದಕ್ಕೂ ಮೊದಲು ರೇಷ್ಮೆ ಬೆಳೆಗಾರರು ತಮ್ಮ ಉತ್ಪನ್ನವನ್ನು ರಾಮನಗರ ಅಥವಾ ಇತರ ಜಿಲ್ಲೆಗಳಿಗೆ ಸಾಗಾಟ ಮಾಡಬೇಕಾಗುತ್ತಿತ್ತು. ಇದರಿಂದ ರೈತರಿಗೆ ಸಾರಿಗೆ ವೆಚ್ಚ ಮತ್ತು ಸಮಯ ಎರಡೂ ಹೆಚ್ಚಾಗುತ್ತಿತ್ತು. ಆದರೆ ಈ ಘಟಕದಿಂದ ಈಗ ರೈತರು ಸ್ಥಳೀಯವಾಗಿಯೇ ರೇಷ್ಮೆ ಪ್ರಕ್ರಿಯೆ ನಡೆಸಲು ಸಾಧ್ಯವಾಗಲಿದೆ ಎಂದರು. ಶಾಸಕರು ರೈತರನ್ನು ಉದ್ದೇಶಿಸಿ, ರೇಷ್ಮೆ ಬೆಳೆಗೆ ಸರ್ಕಾರದಿಂದ ಸಾಕಷ್ಟು ಪ್ರೋತ್ಸಾಹ ದೊರೆಯುತ್ತಿದೆ. ರೈತರು ರೇಷ್ಮೆಯ ಜೊತೆಗೆ ವಾಣಿಜ್ಯ ಬೆಳೆಗಳತ್ತಲೂ ಗಮನಹರಿಸಿ ಆದಾಯದ ಮಾರ್ಗಗಳನ್ನು ವಿಸ್ತರಿಸಬೇಕು. ರೈತರ ಸಮಸ್ಯೆಗಳಿಗೆ ಸರ್ಕಾರ ಹಾಗೂ ಅಧಿಕಾರಿಗಳು ಸಂವಾದದ ಮೂಲಕ ಪರಿಹಾರ ಕಂಡುಹಿಡಿಯಲು ಬದ್ಧರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಬಿಳಿ ಚೌಡಯ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್, ಅರಸೀಕೆರೆ ನಗರಸಭೆ ಅಧ್ಯಕ್ಷ ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ, ಬಗರ್‌ಹುಕುಂ ಸಮಿತಿ ಸದಸ್ಯ ಬಿ.ಎಂ. ಜಯಣ್ಣ, ಬಾಣಾವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರಿಫ್ ಜಾನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರು ಶಿವಮೂರ್ತಿ, ಲಿಂಗರಾಜು, ಮಾಜಿ ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ, ಆರೋಗ್ಯ ಸ್ಥಾಯಿ ಸಮಿತಿ ನಿರ್ದೇಶಕ ಇಮ್ರಾನ್, ಗ್ರಾಮ ಪಂಚಾಯಿತಿ ಸದಸ್ಯರು ಕುಬೇರಪ್ಪ, ಚಂದ್ರಮ್ಮ, ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳು ಗಿರೀಶ್, ಸೀತಾರಾಂ, ದೇವೇಂದ್ರ ಕುಮಾರ್, ಸೌಮ್ಯಶ್ರೀ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಮೆರಾಜ್ ಟ್ರೇಡರ್ಸ್ ಸಂಸ್ಥಾಪಕರಾದ ಮುನಾವರ್ ಪಾಷಾ (ಬೆಂಡೆಕೆರೆ) ಮತ್ತು ಅಕ್ಮಲ್ ಪಾಷಾ (ರಾಮನಗರ) ರವರು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಘಟಕ ಸ್ಥಾಪಿಸಿರುವುದಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಯಿತು.

PREV

Recommended Stories

8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ