ಕನ್ನಡಪ್ರಭ ವಾರ್ತೆ ಮೈಸೂರು
ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ (ಕಾವಾ) ಆವರಣದಲ್ಲಿ ದಸರಾ ಲಲಿತಕಲಾ ಮತ್ತು ಕರಕುಶಲ ಉಪ ಸಮಿತಿಯು ಕರ್ನಾಟಕ ಶಿಲ್ಪಕಲಾ ಶಿಬಿರ ಅಕಾಡೆಮಿ ಸಹಯೋಗದೊಂದಿಗೆ ಆಯೋಜಿಸಿರುವ ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರವನ್ನು ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಚರಿತ್ರೆ ಗೊತ್ತಿಲ್ಲದವರು ಚರಿತ್ರೆಯನ್ನು ಸೃಷ್ಟಿಸಲಾರರು ಎಂಬ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾತಿನಂತೆ ನಾಗರಿಕತೆ ಮತ್ತು ಸಂಸ್ಕೃತಿಯನ್ನು ಸಂಪೂರ್ಣವಾಗಿ ಅರಿಯದವರು ಶಿಲ್ಪಕಲೆ ಮತ್ತು ಕರಕುಶಲಕಲೆಗಳನ್ನು ರಚಿಸಲು ಸಾಧ್ಯವಿಲ್ಲ. ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲೆಯೇ ಶಿಲ್ಪಕಲೆಯಾಗಿರುವಾಗ, ಮೊದಲು ಅದರ ಇತಿಹಾಸವನ್ನು ತಿಳಿದು ನಂತರ ರಚಿಸುವ ಕೆಲಸ ಪ್ರತಿಯೊಬ್ಬ ಕಲಾವಿದನದ್ದಾಗಿರುತ್ತದೆ ಎಂದು ಅವರು ಹೇಳಿದರು.ದೇಶ ಕಂಡಂತಹ ಅಮರ ಶಿಲ್ಪಿ ಜಕಣಚಾರಿ ಅವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿವೆ. ಅಲ್ಲದೆ, ಸೋಮನಾಥಪುರ, ಬೇಲೂರು ಮತ್ತು ಹಳೇಬೀಡಿನ ದೇವಾಯಗಳ ಒಂದೊಂದು ಕೆತ್ತನೆಗಳು ಒಂದೊಂದು ಕಥೆಯನ್ನು ಅದರ ಇತಿಹಾಸವನ್ನು ತಿಳಿಸುತ್ತವೆ. ನಮ್ಮ ದೇಶದ ಸಂಸ್ಕೃತಿ, ಆಚಾರ-ವಿಚಾರ, ಉಡುಗೆ-ತೊಡುಗೆ ಒಟ್ಟಾರೆಯಾಗಿ ಇತಿಹಾಸವನ್ನು ವಿವರವಾಗಿ ತಿಳಿಸುವಂತಹ ಮಹಾನ್ ಕೆಲಸವನ್ನು ಶಿಲ್ಪಕಲೆಗಳು ಮಾಡುತ್ತಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ತನ್ವೀರ್ ಸೇಠ್ ಮಾತನಾಡಿ, ಅತ್ಯಂತ ವಿಶಾಲ ಮತ್ತು ಸುದೀರ್ಘವಾಗಿರುವ ಶಿಲ್ಪಕಲೆಯ ಪ್ರತಿಯೊಂದು ಕಲಾಕೃತಿಗಳು ನೋಡುಗರೊಂದಿಗೆ ತಾವೇ ಮಾತನಾಡುವಂತಿರಬೇಕು. ಅಂತಹ ಜೀವಂತ ಕಲಾಕೃತಿಗಳನ್ನು ಕಲಾವಿದರು ರಚಿಸಬೇಕು ಎಂದು ಹೇಳಿದರು.
ದಸರಾ ಸಂದರ್ಭದಲ್ಲಿ ಕಲಾ ವಿದ್ಯಾರ್ಥಿಗಳು ರಚಿಸುವ ಉತ್ಪನ್ನಗಳನ್ನು ನೆನಪಿಣ ಕಾಣಿಕೆಯಾಗಿ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹವನ್ನು ನೀಡಬೇಕು. ದಸರಾ ಸಂದರ್ಭದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಶಿಲ್ಪಕಲೆ, ಕರಕುಶಲ ಕಲೆ ಹಾಗೂ ಇತ್ಯಾದಿ ವಿಷಯಗಳ ಮೇಲೆ ಸ್ಪರ್ಧೆಗಳನ್ನು ಏರ್ಪಡಿಸಿ, ವಿದ್ಯಾರ್ಥಿಗಳು ಅದರಲ್ಲಿ ಭಾಗವಹಿಸುವಂತೆ ಮಾಡಬೇಕು. ಇದರಿಂದ ಅವರಲ್ಲಿ ಹೆಚ್ಚಿನ ಆಸಕ್ತಿ ಹಾಗೂ ವಿಷಯದ ಮೇಲಿನ ಜ್ಞಾನ ವೃದ್ಧಿಸುತ್ತದೆ ಎಂದರು.
10 ಶಿಲ್ಪಕಲಾವಿದರು ಭಾಗಿ
ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷ ಎಂ.ಸಿ. ರಮೇಶ್, ಶಿಬಿರದ ಸಂಚಾಲಕ ಎಸ್. ಶಿವಪ್ರಸಾದ್ ಮೊದಲಾದವರು ಇದ್ದರು. ಡಾ. ನವೀನ್ ಸ್ವಾಗತಿಸಿದರು.
ಕೋಟ್...
- ಡಾ.ಎಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು----
ಬಾಕ್ಸ್...ಕಾವಾ ಕರಕುಶಲ ವಿವಿ ಆಗಲಿ
ರಾಜ್ಯದಲ್ಲಿ ಕರಕುಶಲ ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸಬೇಕು. ಮೈಸೂರಿನಲ್ಲಿರುವ ಕಾವಾವನ್ನು ಕರಕುಶಲ ವಿವಿ ಆಗಿ ಮಾಡಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಚನ್ನಪಟ್ಟಣದ ಗೊಂಬೆಗಳು, ಕುಂಬಾರರ ಮಡಿಕೆಗಳು, ಕಲ್ಲು ಕೆತ್ತನೆಗಳು ಹಾಗೂ ಇತ್ಯಾದಿಗಳನ್ನು ತಂದು ಅದಕ್ಕೆ ವಿಭಿನ್ನ ರೂಪ ಕೊಟ್ಟು ವಿಶೇಷ ಕಲಾಕೃತಿಗಳ ರಚಿಸಬೇಕು. ಕರಕುಶಲ ಕಲೆಗಳ ಉತ್ತೇಜನಕ್ಕಾಗಿ ವಿಶ್ವವಿದ್ಯಾನಿಲಯ ಸ್ಥಾಪನೆ ಆಗಬೇಕು ಎಂದು ಅವರು ಆಶಿಸಿದರು.----
ಬಾಕ್ಸ್...ಒಂದೂವರೆ ಗಂಟೆ ತಡವಾಗಿ ಬಂದ ಸಚಿವ
ಮೈಸೂರಿನ ಕಾವಾ ಆವರಣದಲ್ಲಿ ದಸರಾ ಅಂಗವಾಗಿ ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರದ ಉದ್ಘಾಟನಾ ಸಮಾರಂಭವು ಬೆಳಗ್ಗೆ 10ಕ್ಕೆ ನಿಗದಿಯಾಗಿತ್ತು. ಆದರೆ, ಉದ್ಘಾಟಕರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ಬೆಳಗ್ಗೆ 11.30 ಆಗಿತ್ತು. ಒಂದೂವರೆ ಗಂಟೆ ತಡವಾಗಿ ಆಗಮಿಸಿದ್ದರೂ ಸಣ್ಣ ವಿಷಾದ ಕೂಡ ವ್ಯಕ್ತಪಡಿಸದೇ ಭಾಷಣ ಮಾಡಿದರು.ಹೊರಾವರಣದಲ್ಲಿ ಓಪನ್ ಸ್ಟೇಜ್ ಹಾಕಿದ್ದರಿಂದ ಶಿಲ್ಪ ಕಲಾವಿದರು, ಕಾವಾ ವಿದ್ಯಾರ್ಥಿಗಳು, ಶಿಬಿರಾರ್ಥಿಗಳು ಬಿಸಿಲಿನಲ್ಲೇ ಸಚಿವರಿಗಾಗಿ ಕಾಯುವ ಪರಿಸ್ಥಿತಿ ಇತ್ತು.