ದ.ಕ. ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

KannadaprabhaNewsNetwork |  
Published : Nov 24, 2026, 01:45 AM IST
ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ದರ್ಶನ್ ಚಾಲನೆ ನೀಡುತ್ತಿರುವುದು | Kannada Prabha

ಸಾರಾಂಶ

ಪ್ರತಿಯೊಬ್ಬರೂ ನಿಯಮಿತವಾಗಿ ಕ್ರೀಡೆ ಮತ್ತು ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಸದೃಢತೆಯ ಜತೆಗೆ ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಸಾಧ್ಯ. ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು.

ಮಂಗಳೂರು: ಪ್ರತಿಯೊಬ್ಬರೂ ನಿಯಮಿತವಾಗಿ ಕ್ರೀಡೆ ಮತ್ತು ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಸದೃಢತೆಯ ಜತೆಗೆ ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಸಾಧ್ಯ. ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು.ಮಂಗಳೂರು ನಗರ ಪೊಲೀಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ವಿಶೇಷ ಕಾರ್ಯಪಡೆ ಘಟಕಗಳ ಮೂರು ದಿನದ ವಾರ್ಷಿಕ ಕ್ರೀಡಾಕೂಟ 2026ನ್ನು ಗುರುವಾರ ಪೊಲೀಸ್ ಕವಾಯತು ಮೈದಾನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ವಿವಿಧ ಪೊಲೀಸ್ ತಂಡಗಳ ಪಥ ಸಂಚಲನ, ಅತಿಥಿಗಳಿಂದ ವಂದನೆ ಸ್ವೀಕಾರ ನಡೆಯಿತು. ಉದ್ಘಾಟನೆಯ ಬಳಿಕ ಕ್ರೀಡಾ ಜ್ಯೋತಿಯ ಆಗಮನ, ಕ್ರೀಡಾ ಪ್ರಮಾಣ ವಚನ ಸ್ವೀಕಾರ ನೆರವೇರಿತು.ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ವಿಶೇಷ ಕಾರ್ಯಪಡೆ ಪೊಲೀಸ್ ಮಹಾನಿರೀಕ್ಷಕ ಡಾ.ಎ.ಎನ್. ಪ್ರಕಾಶ್ ಗೌಡ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಕಾನೂನು ಸುವ್ಯವಸ್ಥೆ ಡಿಸಿಪಿ ಸ್ಯಾಮ್ ವರ್ಗೀಸ್, ಅಪರಾಧ ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ಕೆ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಡಿಸಿಪಿ ಉಮೇಶ್ ಕುಮಾರ್ ಇದ್ದರು.ಜಿಲ್ಲಾ ಪೊಲೀಸ್, ನಗರ ಪೊಲೀಸ್ ಘಟಕದ ವಿವಿಧ ತಂಡಗಳ 200ಕ್ಕೂ ಹೆಚ್ಚು ಸ್ಪರ್ಧಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರಿಯರ ಬದುಕನ್ನು ಮಕ್ಕಳ ನಾಳೆಗಾಗಿ ನೆನಪಿಸಬೇಕಿದೆ: ಪ್ರೊ. ಧರ್ಮ
ಜಿಟಿಟಿಸಿಯಲ್ಲಿ ಕಸ ನಿರ್ವಹಣೆ ಕಾರ್ಯಾಗಾರ