ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

KannadaprabhaNewsNetwork |  
Published : Oct 29, 2026, 02:00 AM IST
27ಎಚ್ಎಸ್ಎನ್1 1:  | Kannada Prabha

ಸಾರಾಂಶ

ಹಾಸನ ವಿಧಾನಸಭಾ ಕ್ಷೇತ್ರದ ಈಚಲಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಒಟ್ಟು ₹೨೫ ಲಕ್ಷ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈಚಲಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಹಾಸನ ವಿಧಾನಸಭಾ ಕ್ಷೇತ್ರದ ಈಚಲಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಒಟ್ಟು ₹೨೫ ಲಕ್ಷ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈಚಲಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಉದ್ಘಾಟಿಸಿದರು.

ಗ್ರಾಮದಲ್ಲಿ ರಸ್ತೆ ಸಮಸ್ಯೆ ಕುರಿತು ಹಲವು ದಿನಗಳಿಂದ ದೂರುಗಳು ಕೇಳಿಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಗ್ರಾಮಸ್ಥರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಸಿಎಂಐಡಿಪಿ ಅನುದಾನದಡಿ ₹೧೫ ಲಕ್ಷ ಹಾಗೂ ಎಸ್‌ಸಿಪಿ ಅನುದಾನದಡಿ ₹೧೦ ಲಕ್ಷ ಸೇರಿ ಒಟ್ಟು ೨೫ ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು ಸಾರ್ವಜನಿಕರ ದೈನಂದಿನ ಜೀವನಕ್ಕೆ ಅತ್ಯಗತ್ಯವಾಗಿದೆ. ರಸ್ತೆ ಸಮಸ್ಯೆಯಿಂದ ಗ್ರಾಮಸ್ಥರು ಎದುರಿಸುತ್ತಿದ್ದ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಕೈಗೆತ್ತಿಕೊಂಡಿರುವ ಈ ಕಾಮಗಾರಿಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ನಿಗದಿತ ಮಾನದಂಡಗಳನ್ನು ಪಾಲಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆದಷ್ಟು ಬೇಗ ಕಾಮಗಾರಿ ಮುಗಿಸಿ ರಸ್ತೆ ಬಳಕೆಗೆ ಮುಕ್ತಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಇದೇ ವೇಳೆ ಈಚಲಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಲಾಯಿತು. ಗ್ರಾಮೀಣ ಭಾಗದ ರೈತ ಕುಟುಂಬಗಳ ಆರ್ಥಿಕ ಪ್ರಗತಿಯಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಮಹಿಳೆಯರು ಸಹಕಾರ ಸಂಘಗಳ ಮೂಲಕ ಸಂಘಟಿತರಾಗಿ ಹಾಲು ಉತ್ಪಾದನೆ ಮತ್ತು ಮಾರಾಟ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಕಟ್ಟಡಗಳು ನೆರವಾಗಲಿವೆ. ಹೈನುಗಾರಿಕೆಯನ್ನು ಅವಲಂಬಿಸಿರುವ ರೈತರು ಹಾಗೂ ಮಹಿಳೆಯರಿಗೆ ಉತ್ತಮ ಸೌಲಭ್ಯ ಕಲ್ಪಿಸುವುದು, ಹಾಲು ಉತ್ಪಾದಕರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವುದು ಇಂತಹ ಸಹಕಾರ ಸಂಘಗಳ ಪ್ರಮುಖ ಉದ್ದೇಶವಾಗಿದೆ. ನೂತನ ಕಟ್ಟಡವು ಸಂಘದ ಕಾರ್ಯಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಹಾಗೂ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ನೆರವಾಗಲಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ, ಮೂಲಸೌಕರ್ಯ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಚಲಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿರುವುದು ಮತ್ತು ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿರುವುದು ಗ್ರಾಮೀಣ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು, ಗ್ರಾಮಸ್ಥರು, ರೈತರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲ ನೀಡದ್ದಕ್ಕೆ ಬೇಕರಿ ಮಾಲೀಕರಿಗೆಧಮ್ಕಿ ಹಾಕಿ ದಾಂಧಲೆ: ಇಬ್ಬರ ಬಂಧನ
ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್