ಬಿಸಲವಾಡಿ ಗ್ರಾಮದ ಕುಂಬಾರ ಬೀದಿಯಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀರಾಮ ಮಂದಿರದ ಪ್ರತಿಷ್ಠಾಪನೆ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು. ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ನೂತನ ಶ್ರೀರಾಮ ಮಂದಿರವನ್ನು ಉದ್ಘಾಟಿಸಿ ಮಾತನಾಡಿ, ಶ್ರೀರಾಮನ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಂದಿರವನ್ನು ಉದ್ಘಾಟಿಸಿರುವುದು ಸಂತಸ ತಂದಿದೆ. ಶ್ರೀರಾಮನು ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ನೆಮ್ಮದಿ ಹಾಗೂ ಸುಖ-ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕಿನ ಬಿಸಲವಾಡಿ ಗ್ರಾಮದ ಕುಂಬಾರ ಬೀದಿಯಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀರಾಮ ಮಂದಿರದ ಪ್ರತಿಷ್ಠಾಪನೆ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು. ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ನೂತನ ಶ್ರೀರಾಮ ಮಂದಿರವನ್ನು ಉದ್ಘಾಟಿಸಿ ಮಾತನಾಡಿ, ಶ್ರೀರಾಮನ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಂದಿರವನ್ನು ಉದ್ಘಾಟಿಸಿರುವುದು ಸಂತಸ ತಂದಿದೆ. ಶ್ರೀರಾಮನು ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ನೆಮ್ಮದಿ ಹಾಗೂ ಸುಖ-ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.
ರಾಜ್ಯ ಹಾಗೂ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಿ, ರೈತರಿಗೆ ಉತ್ತಮ ಬೆಳೆ ದೊರೆಯಲಿ. ಜನರು ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಹೇಳಿದರು.
ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವಸ್ಥಾನಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ೫ ಕೋಟಿ ಅನುದಾನ ನೀಡಲಾಗಿದೆ. ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಾರಮ್ಮ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ ಎಂದು ಹೇಳಿದರು.
ಅದೇ ರೀತಿ ಹರದನಹಳ್ಳಿಯ ದಿವ್ಯಲಿಂಗೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ೩.೬೦ ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದು ಸಚಿವರು ತಿಳಿಸಿದರು.
ಈ ವೇಳೆ ಮುಖಂಡರಾದ ಪಿ,ಎಲ್,ಡಿ ಬ್ಯಾಂಕ್ ನಿರ್ದೇಶಕ ರವಿ, ಮಹದೇವಪ್ಪ ಶೇಖರ್, ನಂದೇಶ್, ಸಿದ್ದಮಲ್ಲು, ಶಿವಸ್ವಾಮಿ, ನಾರಾಯಣನಾಯಕ, ಬಿಸಲವಾಡಿ ಎಸ್. ಉಮೇಗೌಡ ಸೇರಿದಂತೆ ಬಿಸಲವಾಡಿ ಗ್ರಾಮದ ಸಮುದಾಯಗಳ ಮುಖಂಡರು ಅರ್ಚಕರಾದ ರಂಗಪ್ಪ, ಸಮಿತಿ ಸದಸ್ಯರು ಕುಂಬಾರ ಜನಾಂಗದ ಯಜಮಾನರು ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.----------------
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.