ಉಡುಪಿ ಜಿಲ್ಲಾ ದಸರಾ ಕ್ರೀಡಾಕೂಟ ಉದ್ಘಾಟನೆ

KannadaprabhaNewsNetwork |  
Published : Sep 21, 2026, 02:45 AM IST
ಉಡುಪಿ ಜಿಲ್ಲಾ ದಸರಾ ಕ್ರೀಡಾಕೂಟವನ್ನು ಶಾಸಕ ಯಶ್‌ಪಾಲ್ ಸುವರ್ಣ  ಉದ್ಘಾಟಿಸಿರು. | Kannada Prabha

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಜಿಲ್ಲಾ ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿಯನ್ನು ತರಬೇಕು ಎಂದರು.

ಮುಖ್ಯ ಅತಿಥಿಯಾಗಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಪೂರ್, ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಭಾಗವಹಿಸಿದ್ದರು ಕುಂದಾಪುರ ಹಾಗೂ ಕಾಪು ತಾಲೂಕು ಕ್ರೀಡಾಧಿಕಾರಿಗಳಾದ ಸತ್ಯನಾರಾಯಣ ಜಿ. ಹಾಗೂ ರವೀಂದ್ರ ನಾಯ್ಕ ಅವರು ವೇದಿಕೆಯಲ್ಲಿ ಹಾಜರಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ ನೆರವೇರಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಿಂದ ಪರಾರಿಯಾಗಿದ್ದ ಹಂತಕ 12 ವರ್ಷ ಬಳಿಕ ಅರೆಸ್ಟ್‌
ಕನಸು ಅರ್ಥೈಸಿಕೊಂಡು ಮುನ್ನಡೆದರೆ ಬದುಕು ಗೆದ್ದಂತೆ