ಮಹಿಳಾ ಮಂಡಲಿಗಳ ಒಕ್ಕೂಟ ಕಾರ್ಯಕ್ರಮವನ್ನು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ದ.ಕ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ ಅಧ್ಯಕ್ಷ ತೆ ವಹಿಸಲಿದ್ದಾರೆ. ಸ್ವಾಗತ ಮತ್ತು ಪ್ರಸ್ತಾವನೆಯನ್ನು ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ನೂತನ ಅಧ್ಯಕ್ಷೆ ದೇವಕಿ ಆರ್ ಉಳ್ಳಾಲ್ ನೆರವೇರಿಸುವರು.
ಉಳ್ಳಾಲ: ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಉಳ್ಳಾಲ ತಾಲೂಕು ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಫೆ. 1ರಂದು ಬೆಳಿಗ್ಗೆ 9.30 ಕ್ಕೆ ಜರುಗಲಿದೆ ಎಂದು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಚಂಚಲ ತೇಜೋಮಯ ಹೇಳಿದರು.
ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.ಕಾರ್ಯಕ್ರಮವನ್ನು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ದ.ಕ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ ಅಧ್ಯಕ್ಷ ತೆ ವಹಿಸಲಿದ್ದಾರೆ. ಸ್ವಾಗತ ಮತ್ತು ಪ್ರಸ್ತಾವನೆಯನ್ನು ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ನೂತನ ಅಧ್ಯಕ್ಷೆ ದೇವಕಿ ಆರ್ ಉಳ್ಳಾಲ್ ನೆರವೇರಿಸಲಿದ್ದು, ಉಳ್ಳಾಲ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಬಾಲಕೃಷ್ಣ, ಉಳ್ಳಾಲ ನಗರಸಭೆ ಪೌರಾಯುಕ್ತ ವಾಣಿ ಆಳ್ವ, ಉದ್ಯಮಿ ಜಬ್ಬಾರ್, ಸಾಮಾಜಿಕ ಕಾರ್ಯಕರ್ತ ಸುರೇಶ್ ಭಟ್ನಗರ, ಸೋಮೇಶ್ವರ ಪುರಸಭೆ ಕಾರ್ಯನಿರ್ವಹಣಾಧಿಕಾರಿ ಮತ್ತಡಿ, ಜಿ.ಪಂ ಮಾಜಿ ಅಧ್ಯಕ್ಷೆ ಕಸ್ತೂರಿ ಪಂಜ, ಉದ್ಯಮಿ ಮಹಮ್ಮದ್ ಆಸೀಫ್ ಇಬ್ರಾಹಿಂ, ಎ.ಜೆ. ಶೇಖರ್ ಭಾಗವಹಿಸಲಿದ್ದಾರೆ.ಈ ಸಂದರ್ಭ ನೂತನ ಅಧ್ಯಕ್ಷೆಯಾಗಲಿರುವ ದೇವಕಿ ಆರ್ ಉಳ್ಳಾಲ್, ಉಪಾಧ್ಯಕ್ಷೆ ಸ್ವಪ್ನ ಹರೀಶ್, ಕೋಶಾಧಿಕಾರಿ ಶಶಿಕಾಂತಿ ಉಳ್ಳಾಲ, ಶಶಿಕಲಾ, ಸಾಂಸ್ಕೃತಿಕ ಕಾರ್ಯದರ್ಶಿ ಜೆಸಿಂತಾ ಮೆಂಡೋನ್ಸ, ಕ್ರೀಡಾ ಕಾರ್ಯದರ್ಶಿ ಪ್ರೇಮ ಮುಗ್ಗಪ್ಪ, ಕಾರ್ಯದರ್ಶಿ ದಾಕ್ಷಾಯಿಣಿ ಎಸ್.ಜೆ., ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಶಶಿಕಲಾ, ಸಂಘಟನಾ ಕಾರ್ಯದರ್ಶಿ ಝೀನಬ್, ಲತಾ ತಲಪಾಡಿ, ಹೇಮಾ ಅಶೋಕ್ ಉಪಸ್ಥಿತರಿದ್ದರು.ಕನಕದಾಸರ ಕೀರ್ತನೆ ಫೆ.೨ರಂದುಮಂಗಳೂರು ವಿಶ್ವವಿದ್ಯಾಲಯ, ಕನಕದಾಸ ಸಂಶೋಧನ ಕೇಂದ್ರದ 2023-24ನೇ ಸಾಲಿನ ಶೈಕ್ಷಣಿಕ ವರ್ಷದ `ಕನಕ ಕೀರ್ತನ ಗಂಗೋತ್ರಿ’ ಶೈಕ್ಷಣಿಕ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಾಮುದಾಯಿಕ ಪಾಲ್ಗೊಳ್ಳುವಿಕೆಯ ಕನಕದಾಸರ ಕೀರ್ತನೆಗಳ ಸಮೂಹ ಗಾಯನ ಕಾರ್ಯಕ್ರಮ ಫೆ. 2ರಂದು ಪೂರ್ವಾಹ್ನ 10ರಿಂದ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿರುವುದು.ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ, ರಂಜನಿ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷರು ಮತ್ತು ವಿಶ್ರಾಂತ ಸಸ್ಯಶಾಸ್ತ್ರ ಪ್ರಾಧ್ಯಾಪಕರು ಪ್ರೊ. ವಿ. ಅರವಿಂದ ಹೆಬ್ಬಾರ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಯರಾಜ್ ಅಮೀನ್ ವಹಿಸಲಿರುವರು. ಮಂಗಳೂರು ವಿಶ್ವವಿದ್ಯಾಲಯ ಸಮಾಜಕಾರ್ಯ ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ. ಮೋಹನ್ ಎಸ್. ಸಿಂಘೆ, ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಸೋಮಣ್ಣ ಹೊಂಗಳ್ಳಿ, ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಧನಂಜಯ ಕುಂಬ್ಳೆ ಉಪಸ್ಥಿತರಿರುವರು.ಉದ್ಘಾಟನಾ ಸಮಾರಂಭದ ಬಳಿಕ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಅಧ್ಯಾಪಕ, ಅಧ್ಯಾಪಕೇತರ ಮತ್ತು ಸಾರ್ವಜನಿಕ ಮಟ್ಟದಲ್ಲಿ ಕನಕದಾಸರ ಕೀರ್ತನೆಗಳ ʻಸಮೂಹ ಗಾಯನʼ ಕಾರ್ಯಕ್ರಮ ನಡೆಯಲಿದೆ ಎಂದು ಕನಕದಾಸ ಸಂಶೋಧನ ಕೇಂದ್ರದ ಪ್ರಕಟಣೆ ತಿಳಿಸಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.