17ರಂದು ಸಂಗೊಳ್ಳಿಯಲ್ಲಿ ವಿವಿಧ ಕಟ್ಟಡ ಉದ್ಘಾಟನೆ

KannadaprabhaNewsNetwork | Published : Jan 13, 2024 1:30 AM

ಸಾರಾಂಶ

ಜಿಲ್ಲೆಯ ಬೈಲಹೊಂಗಲ ತಾಲೂಕು ಸಂಗೊಳ್ಳಿಯಲ್ಲಿ ಜ.17 ರಂದು ಮಧ್ಯಾಹ್ನ 12ಕ್ಕೆ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ(ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕಭವನ ಮತ್ತು ಭೊಜನಾಲಯ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಈ ಸಮಾರಂಭ ನಡೆಯಲಿದೆ.

ಕನ್ನಡಪ್ರಬ ವಾರ್ತೆ ಬೆಳಗಾವಿ

ಜಿಲ್ಲೆಯ ಬೈಲಹೊಂಗಲ ತಾಲೂಕು ಸಂಗೊಳ್ಳಿಯಲ್ಲಿ ಜ.17 ರಂದು ಮಧ್ಯಾಹ್ನ 12ಕ್ಕೆ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ(ಶಿಲ್ಪವನ) ಹಾಗೂ ಸಂಗೊಳ್ಳಿ ರಾಯಣ್ಣ ಸ್ಮಾರಕಭವನ ಮತ್ತು ಭೊಜನಾಲಯ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಈ ಸಮಾರಂಭ ನಡೆಯಲಿದೆ.

ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಗೊಳ್ಳಿಯ ಹಿರೇಮಠದ ಗುರು ಸಿದ್ಧಲಿಂಗೇಶ್ವರ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿಗಳು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ಧರಾಮಯ್ಯ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಇಲಾಖೆ ಸಚಿವ ಸುರೇಶ ಬಿ.ಎಸ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸುವರು. ರಾಮದುರ್ಗ ಶಾಸಕ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಹೊಸದಿಲ್ಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಪ್ರತಿಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ ವಿಶೇಷ ಆಮಂತ್ರಿತರಾಗಿರುವರು.

ಸಂಸದರಾದ ಅನಂತಕುಮಾರ ಹೆಗಡೆ, ಅಣ್ಣಸಾಹೇಬ್‌ ಜೊಲ್ಲೆ, ಈರಣ್ಣ ಕಡಾಡಿ, ಮಂಗಲ ಅಂಗಡಿ, ಸಂಗೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ರೂಪಾ ಚವಡಿ ಹಾಗೂ ಉಪಾಧ್ಯಕ್ಷ ಫಕೀರಪ್ಪ ಗಿರಿಮಲ್ಲಪ್ಪ ಕುರಿ, ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಗೌರವ ಉಪಸ್ಥಿತರಿರುವರು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಾದ ಹೊರಪೇಟೆ ಮಲ್ಲೇಶಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಧ್ಯಯನ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ, ಶಾಸಕರಾದ ಬಸವರಾಜ ಶಿವಣ್ಣನವರ, ಬೈರತಿ ಬಸವರಾಜ,,ರಘುನಾಥರಾವ್ ಮಲ್ಯಾಪುರೆ, ಬಿ.ಜಿ.ಗೋವಿಂದಪ್ಪ, ರಾಘವೇಂದ್ರ ಹಿಟ್ನಾಳ, ಸಿ.ಬಿ.ಸುರೇಶ ಬಾಬು, ಬಿ.ಎಚ್.ಶ್ರೀನಿವಾಸ ,ಕೆ.ಎ.ತಿಪ್ಪೇಸ್ವಾಮಿ,ಆನಂದ ಕೆ.ಎಸ್, ಮಂಜುನಾಥ, ಡಿ.ರವಿಶಂಕರ್, ಭೀಮಸೇನ ಬಿ.ಚಿಮ್ಮನಕಟ್ಟಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಇದೇ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ಹರ್ಷಲ್ ಭೋಯರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಉತ್ತರವಲಯ ಐಜಿಪಿ ವಿಕಾಶಕುಮಾರ ವಿಕಾಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಎಸ್. ಗುಳೇದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಕೆ.ಎ.ದಯಾನಂದ ಉಪಸ್ಥಿತರಿರುವರು.

Share this article