ವಿದ್ಯಾ ಪೋಷಕ್ 22ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ

KannadaprabhaNewsNetwork |  
Published : Sep 29, 2026, 02:45 AM IST
ವಿದ್ಯಾಪೋಷಕ್‌ನಿಂದ ವಿನಮ್ರ ಸಹಾಯಧನವನ್ನು ವಿತರಿಸಲಾಯಿತು | Kannada Prabha

ಸಾರಾಂಶ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಉದ್ಘಾಟಿಸಿದರು.

ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಉದ್ಘಾಟಿಸಿದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಯಾರಿಗೆ ಯಾವಾಗ ಏನು ಬೇಕು ಎಂಬುದನ್ನು ತಿಳಿದು ನೀಡುವುದನ್ನು ಯಕ್ಷಗಾನ ಕಲಾರಂಗ ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ ಈ ಭಾಗದ ವಿದ್ಯಾರ್ಥಿಗಳಿಗೆ, ಸಮಾಜಕ್ಕೆ ತಲುಪಿಸುತ್ತಿದೆ ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ ಅವರು ಮಣಿಪಾಲ ಆರೋಗ್ಯ ಕಾರ್ಡನ್ನು ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿತರಿಸಿದರು.ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವರು ಕಲಾರಂಗದ ಶಿಕ್ಷಣ ಮತ್ತು ಸಮಾಜಪರ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ಮಾಜಿ ರೋಟರಿ ಗವರ್ನರ್ ಡಾ. ಪಿ. ನಾರಾಯಣ, ಉಡುಪಿ ಆದರ್ಶ ಆಸ್ಪತ್ರೆಯ ಡಾ. ಜಿ. ಎಸ್. ಚಂದ್ರಶೇಖರ ಅಭ್ಯಾಗತರಾಗಿ ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ ಗೋವಾ ಒಎನ್‌ಜಿಸಿಯ ನಿವೃತ್ತ ಸಿಜಿಎಂ ಬನ್ನಾಡಿ ನಾರಾಯಣ ಆಚಾರ್, ಮಂಗಳೂರಿನ ವೈದ್ಯ ಡಾ. ಜೆ. ಎನ್. ಭಟ್, ಯು.ಎಸ್‌.ಎ.ಯ ಶಿಕ್ಷಣತಜ್ಞ ಡಾ. ಸುದರ್ಶನ ಮೂರ್ತಿ, ಹುಬ್ಬಳ್ಳಿ ಮೈಲೈಫ್‌ನ ಸಂಸ್ಥಾಪಕ ಪ್ರವೀಣ್ ವಿ. ಗುಡಿ ಉಪಸ್ಥಿತರಿದ್ದರು

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ಎಸ್‌.ವಿ. ಭಟ್, ವಿ.ಜಿ.ಶೆಟ್ಟಿ ಉಪಸ್ಥಿತರಿದ್ದರು. ನಾರಾಯಣ ಎಂ. ಹೆಗಡೆ ಸಹಕರಿಸಿದರು. ಮುರಲಿ ಕಡೆಕಾರ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತ ಚೋರಿ ಮಾಡಿ ಚುನಾವಣೆ ಗೆಲ್ಲುವ ಹುನ್ನಾರ: ಸಚಿವ ಎಂ.ಬಿ.ಪಾಟೀಲ
ಕೂಲಿ ಮಾಡಿ ಸಿಎಂಗೆ ₹3000 ಕಳಿಸಿದ ರೈತರು