ಕುಡಿದ ಅಮಲಿನಲ್ಲಿ ವ್ಯಕ್ತಿಗೆ ಚಾಕುವಿನಿಂದ ಇರಿದ ಆರೋಪಿ ಬಂಧನ

KannadaprabhaNewsNetwork |  
Published : Jun 19, 2026, 01:15 AM IST
54 | Kannada Prabha

ಸಾರಾಂಶ

ಆನಂದ ಮದ್ಯದ ಅಮಲಿನಲ್ಲಿ ಗ್ರಾಮಸ್ಥರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಗ್ರಾಮಸ್ಥ ಮಂಜು ಆತನನ್ನು ಪ್ರಶ್ನಿಸಿದ್ದಾರೆ

ಕನ್ನಡಪ್ರಭ ವಾರ್ತೆ ಸರಗೂರುಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ತಾಲೂಕಿನ ಎಂ.ಸಿ. ತಳಲು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸರಗೂರು ಪೊಲೀಸರು ಬಂಧಿಸಿದ್ದಾರೆ.ಗ್ರಾಮದ ರಾಜಶೇಖರ್ ಎಂಬವರು ಚಾಕು ಇರಿತದಿಂದ ಗಾಯಗೊಂಡವರಾಗಿದ್ದು, ಅದೇ ಗ್ರಾಮದ ಆನಂದ ಬಂಧಿತ ಆರೋಪಿಯಾಗಿದ್ದಾನೆ.ಬುಧವಾರ ಮಧ್ಯಾಹ್ನ ಆನಂದ ಮದ್ಯದ ಅಮಲಿನಲ್ಲಿ ಗ್ರಾಮಸ್ಥರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಗ್ರಾಮಸ್ಥ ಮಂಜು ಆತನನ್ನು ಪ್ರಶ್ನಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಆನಂದ, ತನ್ನನ್ನು ಪ್ರಶ್ನಿಸಿದವರನ್ನು ಚಾಕುವಿನಿಂದ ಇರಿಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.ಈ ಸಂದರ್ಭದಲ್ಲಿ ಮಂಜುವಿನ ಪಕ್ಕದಲ್ಲಿದ್ದ ರಾಜಶೇಖರ್ ಪರಿಸ್ಥಿತಿಯನ್ನು ಶಾಂತಗೊಳಿಸಲು ಹಾಗೂ ಆನಂದನಿಗೆ ಬುದ್ಧಿವಾದ ಹೇಳಲು ಮುಂದಾಗಿದ್ದಾರೆ. ಆದರೆ ಇದರಿಂದ ಮತ್ತಷ್ಟು ಉದ್ರಿಕ್ತಗೊಂಡ ಆನಂದ, ತನ್ನ ಬಳಿ ಇದ್ದ ಚಾಕುವಿನಿಂದ ರಾಜಶೇಖರ್ ಅವರ ಹೊಟ್ಟೆ ಭಾಗಕ್ಕೆ ಬಲವಾಗಿ ಇರಿದಿದ್ದಾನೆ ಎನ್ನಲಾಗಿದೆ.ಗಂಭೀರವಾಗಿ ಗಾಯಗೊಂಡ ರಾಜಶೇಖರ್ ಅವರನ್ನು ತಕ್ಷಣ ಸರಗೂರಿನ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪ್ರಕರಣ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ.ವೀರೇಂದ್ರ ಹೆಗ್ಗಡೆಗೆ ಸಿದ್ಧಶ್ರೀ ಪ್ರಶಸ್ತಿ
ಮೊರಾರ್ಜಿ ವಸತಿ ಶಾಲೆಯ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ದೂರು