72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿದ ಟಿಎಂಎಸ್ ಅಧ್ಯಕ್ಷಕನ್ನಡಪ್ರಭ ವಾರ್ತೆ ಶಿರಸಿ
ನಗರದ ಎಪಿಎಂಸಿ ಆವಾರದಲ್ಲಿರುವ ಟಿಆರ್‌ಸಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉತ್ತರ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಕುಮಟಾ, ಕೆಡಿಸಿಸಿ ಬ್ಯಾಂಕ್, ಸಹಕಾರ ಇಲಾಖೆ, ತೋಟಗಾರ್ಸ್ ರೂರಲ್ ಕೋ ಆಫ್ ಅಗ್ರಿಕಲ್ಚರಲ್ ಮಲ್ಟಿಪರ್ಸಸ್ ಸೊಸೈಟಿ ಶಿರಸಿ ಹಾಗೂ ಶಿರಸಿ ತಾಲೂಕಿನ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಹಕಾರಿ ಸಂಘಗಳ ಕಾಯ್ದೆ, ವ್ಯವಹಾರಗಳ ತಿಳುವಳಿಕೆ ಎಷ್ಟಿದೆ ಎಂಬುದು ಗಮನಾರ್ಹ. ಮಕ್ಕಳಿಗೆ ಸಹಕಾರಿ ವ್ಯವಸ್ಥೆಯ ಕುರಿತು ತಿಳುವಳಿಕೆ ನೀಡುವ ಅವಶ್ಯಕತೆ ಇದೆ. ರಾಜ್ಯದಲ್ಲಿ ರಾಷ್ಟ್ರದಲ್ಲಿ ಸಹಕಾರಿ ಆಂದೋಲನ ಎಷ್ಟರ ಮಟ್ಟಿಗೆ ಬೆಳೆದಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿದಿಲ್ಲ. ಪಠ್ಯಪುಸ್ತಕಗಳಲ್ಲಿ ಸಹಕಾರಿ ವ್ಯವಸ್ಥೆಯ ಕುರಿತು ಪಾಠಗಳು ಬರುವವರೆಗೂ ಜನರಿಗೆ ಸಹಕಾರಿ ತತ್ವಗಳನ್ನು ತಿಳಿಸಲು ಸಾಧ್ಯವಿಲ್ಲ. ವಿದ್ಯಾರ್ಥಿ ಘಟ್ಟದಿಂದಲೇ ಸಹಕಾರಿ ತತ್ವಗಳ ಮನವರಿಕೆ ಆಗಬೇಕು. ಮುಂದೆ ವಿದ್ಯಾರ್ಥಿಗಳಿಗೆ ಈ ವಿಷಯ ಬಹಳ ಅನುಕೂಲವಾಗಲಿದೆ ಎಂದರು.ಸಹಕಾರಿ ಕಾಯ್ದೆಗಳಲ್ಲಿ ನಿರಂತರವಾಗಿ ಹಸ್ತಕ್ಷೇಪ ನಡೆಯುತ್ತಿದೆ. ನ್ಯಾಯಾಲಯಗಳಿಗೆ ಹೋಗುವ ಸಂಖ್ಯೆ ಕಡಿಮೆಯಾಗಬೇಕು. ಭಕ್ತಿ-ಭಾವ ಇರುವವರು ದೇವಸ್ಥಾನಗಳನ್ನು ಸ್ಥಾಪನೆ ಮಾಡುತ್ತಾರೆ. ರೈತ ಸಮುದಾಯ ಸಹಕಾರಿ ಸಂಘಗಳನ್ನು ಸ್ಥಾಪನೆ ಮಾಡಿಕೊಂಡಿದೆ. ಸಹಕಾರಿ ಸಂಘಗಳ ಬಲವರ್ಧನೆಗೆ ಹೆಚ್ಚಿನ ಗಮನ ನೀಡಬೇಕು ಎಂದರು.
ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಮಾತನಾಡಿ, ಹಿಂದಿನವರ ಹೆಸರನ್ನು ಹೇಳಿಕೊಂಡೇ ನಾವು ಮುಂದೆ ಹೋಗುತ್ತಿದ್ದೇವೆ. ನಾವೇನು ಮಾಡಬೇಕು ಎಂಬುದರಲ್ಲಿ ನಾವು ಹಿಂದಿದ್ದೇವೆ. ಸಹಕಾರಿ ಕ್ಷೇತ್ರ ಯಾರ ಕಪಿಮುಷ್ಠಿಯಲ್ಲಿ ಸಿಲುಕಿ ಒದ್ದಾಡುತ್ತಿದೆ ಎಂದು ತಿಳಿಯುತ್ತಿಲ್ಲ. ಸಹಕಾರಿ ಕ್ಷೇತ್ರದ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಸಹಕಾರ ಕ್ಷೇತ್ರ ಬಡವಾಗದಂತೆ ನಾವು ನೋಡಿಕೊಳ್ಳಬೇಕು. ಅಂತಹ ಬಹುದೊಡ್ಡ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಡೆವಲಪ್ಮೆಂಟ್ ಸೊಸೈಟಿ ಅಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ, ಟಿಆರ್‌ಸಿ ಸೊಸೈಟಿ ಉಪಾಧ್ಯಕ್ಷ ವಿಶ್ವಾಸ ಬಲ್ಸೆ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿರ್ದೇಶಕ ಶ್ರೀಪಾದ ಹೆಗಡೆ ಕಡವೆ ಮಾತನಾಡಿದರು.
ಕದಂಬ ಮಾರ್ಕೆಟಿಂಗ್ ಸಹಕಾರ ಸಂಘದ ಅಧ್ಯಕ್ಷ ಶಂಭುಲಿಂಗ ಹೆಗಡೆ ಇದ್ದರು. ಯೂನಿಯನ್ ನಿರ್ದೇಶಕ ಮಹೇಂದ್ರ ಭಟ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಸವೇಶ್ವರ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ