ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವರಾಮ ಜನ್ಮ ದಿನ
ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕ. ಇವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಕಂದಾಯ ಇಲಾಖೆ ಶಿರಸ್ತೇದಾರ್ ಪ್ರವೀಣ್ ಕುಮಾರ್ ಹೇಳಿದರು.
ಪಟ್ಟಣದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವರಾಮ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ ಅಂಬೇಡ್ಕರ್ ಅವರನ್ನು ಕೇವಲ ಒಂದು ವರ್ಗ ಅಥವಾ ಸಮುದಾಯಕ್ಕೆ ಸೀಮಿತ ವಾಗಿ ನೋಡಬಾರದು. ಎಲ್ಲಾ ವರ್ಗದ ನಾಯಕರಾಗಿ ಕಾಣಬೇಕು. ಬದುಕಿನುದ್ದಕ್ಕೂ ಕಷ್ಟ ಕಾರ್ಪಣ್ಯಗಳನ್ನು ಎದುರಿಸಿ ಉನ್ನತ ವ್ಯಾಸಂಗಗಳಿಸಿ ಸಂವಿಧಾನ ರಚಿಸಿ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಅವರ ತತ್ವಾದರ್ಶ ಸರ್ವಕಾಲಿಕ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ವರಲಕ್ಷ್ಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅಂಬೇಡ್ಕರ್ ಕೊಡುಗೆ ಅನುಪಮ. ಬದುಕಿನುದ್ದಕ್ಕೂ ಬಡವರ, ಶೋಷಿತರ, ದೀನದಲಿತರ ಏಳಿಗೆಗಾಗಿ ಹೋರಾಡಿದರು. ಶಿಕ್ಷಣ, ಸಂಘಟನೆಗೆ ಪ್ರಾಮುಖ್ಯತೆ ನೀಡಿದರು. ಅಸ್ಪೃಷ್ಯತೆ, ಜಾತೀಯತೆ , ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದರು ಎಂದರು.
14 ಶ್ರೀ ಚಿತ್ರ 1-