ಉದ್ಯೋಗ ಖಾತ್ರಿ ಕೂಲಿ 1 ಸಾವಿರಕ್ಕೆ ಹೆಚ್ಚಿಸಿ

KannadaprabhaNewsNetwork |  
Published : Nov 06, 2026, 01:45 AM IST
ಚಿತ್ರ 5ಬಿಡಿಆರ್57 | Kannada Prabha

ಸಾರಾಂಶ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ವಿ.ಬಿ.ಜಿ ರಾಮ ಜಿ ಯೋಜನೆಯಡಿ ನೀಡುತ್ತಿರುವ ದಿನಗೂಲಿಯನ್ನು ಕನಿಷ್ಠ 1,000ಕ್ಕೆ ಹೆಚ್ಚಿಸಬೇಕು. ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 6 ಸಾವಿರ ರು. ದರ ನಿಗದಿಪಡಿಸಬೇಕು’ ಎಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಿಗರ ರಕ್ಷಣಾ ವೇದಿಕೆ ಮುಖಂಡರು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಬೀದರ್

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ವಿ.ಬಿ.ಜಿ ರಾಮ ಜಿ ಯೋಜನೆಯಡಿ ನೀಡುತ್ತಿರುವ ದಿನಗೂಲಿಯನ್ನು ಕನಿಷ್ಠ 1,000ಕ್ಕೆ ಹೆಚ್ಚಿಸಬೇಕು. ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 6 ಸಾವಿರ ರು. ದರ ನಿಗದಿಪಡಿಸಬೇಕು’ ಎಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಿಗರ ರಕ್ಷಣಾ ವೇದಿಕೆ ಮುಖಂಡರು ಆಗ್ರಹಿಸಿದರು.

ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ಶಿವಕುಮಾರ ಎಸ್. ತುಂಗಾ,‘ದಿನದಿಂದ ದಿನಕ್ಕೆ ಅಕ್ಕಿ, ಅಡುಗೆ ಎಣ್ಣೆ, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗು ತ್ತಿದೆ. ಆದರೆ, ಕೂಲಿ ಕಾರ್ಮಿಕರಿಗೆ ನೀಡುತ್ತಿರುವ ವೇತನ ಮಾತ್ರ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ದಿನಕ್ಕೆ ಸುಮಾರು 385 ರು.ಕೂಲಿ ಪಡೆದು ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಇತರ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯುವ ಕಾರ್ಮಿಕರಿಗೆ ಕನಿಷ್ಠ 1 ಸಾವಿರದಿಂದ 1,500 ರು.ವರೆಗೆ ದಿನ ಗೂಲಿ ನಿಗದಿಪಡಿಸುವ ಅಗತ್ಯವಿದೆ. ಬೆಲೆ ಏರಿಕೆಗೆ ಅನುಗುಣವಾಗಿ ಕೂಲಿ ಪರಿಷ್ಕರಣೆ ಮಾಡಬೇಕು. ಕಾರ್ಮಿಕರಿಗೆ ಸೂಕ್ತ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ವೇದಿಕೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಖಾ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯುವ ಮಹಿಳೆಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜಿಪಿಎಸ್ ಆಧಾರಿತ ಹಾಜರಾತಿ ವ್ಯವಸ್ಥೆಯಿಂದ ಕಾರ್ಮಿಕರು ಬೆಳಿಗ್ಗೆ ಮತ್ತು ಸಂಜೆ ಹಾಜರಾತಿಗಾಗಿ ಕಾಯಬೇಕಾಗಿದೆ. ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದ ಹಾಜರಾತಿ ದಾಖಲಾಗದೆ ಕೂಲಿ ಹಣ ಪಡೆಯಲು ಪರದಾಡುವಂತಾಗಿದೆ ಎಂದು ದೂರಿದರು.

ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯದರ್ಶಿ ರಘುಪ್ರಿಯ, ವಿಶ್ವ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ಮಾತನಾಡಿ, ರೈತರು ಹಾಗೂ ಕೂಲಿ ಕರ್ಮಿನಕರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಿಗರ ರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ಜೈರಾಜ ದೊಡ್ಮನಿ, ಶ್ರೀಕಾಂತ ಭವಾನಿ, ಸಂಜು ಗುಬ್ಬೆ, ಶಾಂತಾಬಾಯಿ ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್‌: ನ್ಯಾಯಾಲಯಕ್ಕೆ ಹಲವು ದಾಖಲೆ ಸಲ್ಲಿಸಿದ ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ
ಮದುವೆ ಆಗುವಂತೆ ಉದ್ಯಮಿಗೆ ಹನಿಟ್ರ್ಯಾಪ್: ₹2 ಕೋಟಿ ಬೇಡಿಕೆ